Friday, September 20, 2024
ಸುದ್ದಿ

ಪೆಟ್ರೋಲ್-ಡೀಸೆಲ್ ದರ ಏರಿಕೆ: ತಪ್ಪುತ್ತಿಲ್ಲ ಜನಸಾಮಾನ್ಯರ ಬವಣೆ – ಕಹಳೆ ನ್ಯೂಸ್

ಮಂಗಳೂರು: ಪೆಟ್ರೋಲ್-ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಇದರ ಪರಿಣಾಮ ವಾಹನ ಸವಾರರು ತತ್ತರಿಸಿ ಹೋಗಿದ್ದಾರೆ. ಸಾಗಾಣಿಕೆ ವೆಚ್ಚದ ಕಾರಣಕ್ಕೆ ದೈನಂದಿನ ವಸ್ತುಗಳ ಬೆಲೆಯೂ ಏರಿಕೆಯಾಗಿದ್ದು, ಜನಸಾಮಾನ್ಯರು ಬವಣೆ ಪಡುವಂತಾಗಿದೆ.

ಇಂದು ಕೂಡ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆಯಲ್ಲಿ 15 ಪೈಸೆ ಏರಿಕೆಯಾಗುವ ಮೂಲಕ ಪ್ರತಿ ಲೀಟರ್ ಗೆ 84 ರೂ. ತಲುಪಿದೆ. ಡೀಸೆಲ್ ಬೆಲೆಯಲ್ಲಿ 20 ಪೈಸೆ ಏರಿಕೆಯಾಗಿದ್ದು, ಈಗ 75.45 ರೂ. ಗಳಿಗೆ ಲಭ್ಯವಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ಬೆಲೆ 14 ಪೈಸೆ ಏರಿಕೆಯಾಗಿದ್ದು, ಪ್ರತಿಲೀಟರ್ ಗೆ 91.34 ರೂ. ಗಳಿಗೆ ಲಭ್ಯವಾಗುತ್ತಿದೆ. ಅದೇ ರೀತಿ ಡೀಸೆಲ್ ಬೆಲೆಯಲ್ಲಿ 21 ಪೈಸೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಗೆ 80.10 ರೂ. ತಲುಪಿದೆ.

ಜಾಹೀರಾತು