Tuesday, January 21, 2025
ದಕ್ಷಿಣ ಕನ್ನಡಪುತ್ತೂರು

ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವಹಿಂದು ಪರಿಷತ್ ಬಜರಂಗದಳ ಹಾಗೂ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ – ಕಹಳೆ ನ್ಯೂಸ್

ಪುತ್ತೂರು : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಆ.14ರ ಮಧ್ಯ ರಾತ್ರಿ ವಿಶ್ವಹಿಂದು ಪರಿಷತ್ ಬಜರಂಗದಳ ಹಾಗೂ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ, ಭಾರತ ಮಾತಾ ಪೂಜನಾ ಹಾಗೂ ನಿವೃತ್ತ ಯೋಧರ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉದ್ಯಮಿಗಳಾದ ಸೀತಾರಾಮ ರೈ ಕೈಕಾರ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಪುತ್ತೂರು ಹಿಂದೂ ಜಾಗರಣಾ ವೇದಿಕೆ ಇದರ ಗೌರವಾಧ್ಯಕ್ಷರಾದ ಡಾ. ಎಂ ಕೆ ಪ್ರಸಾದ್ ಉದ್ಘಾಟಿಸಲಿದ್ದು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕರವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಪುತ್ತೂರಿನ ಬೊಳುವಾರಿ ಶ್ರೀ ಆಂಜನೇಯ ಮಂತ್ರಾಲಯದಿAದ ಹೊರಟು ಕಿಲ್ಲೆ ಮೈದಾನ ಅಮರ್ ಜವಾನ್ ಜ್ಯೋತಿ ಸ್ಮಾರಕದವರೆಗೆ ನಡೆಯಲಿರುವ ಈ ಬೃಹತ್ ಪಂಜಿನ ಮೆರವಣಿಗೆಯಲ್ಲಿ ಪುತ್ತೂರು ಹಿಂದು ಜಾಗರಣಾ ವೇದಿಕೆ ಹಾಗೂ ವಿಶ್ವ ಹಿಂದು ಪರಿಷತ್ ಭಜರಂಗದಳದ ಅನೇಕ ಕಾರ್ಯಕರ್ತರು ಭಾಗವಹಿಸಲಿದ್ದಾರೆ.