Monday, January 20, 2025
ಪುತ್ತೂರು

ಸುಳ್ಯದಲ್ಲಿ ನೈತಿಕ ಪೊಲೀಸ್ ಗಿರಿ ಆರೋಪ- ಹಿಂದೂ ಯುವಕರು ವಶಕ್ಕೆ; ರಾತ್ರೋರಾತ್ರಿ ಪುತ್ತಿಲ ಠಾಣೆಗೆ,ಮಾತುಕತೆ;-ಯುವಕರನ್ನು ಬಿಡುಗಡೆಗೊಳಿಸುವ ಭರವಸೆ – ಕಹಳೆ ನ್ಯೂಸ್

ಹಿಂದೂ ಯುವತಿಯೊಂದಿಗೆ ಅನ್ಯಕೋಮಿನ ಯುವಕನೋರ್ವ ಕಾರಿನಲ್ಲಿ ಸುತ್ತಾಟ ನಡೆಸಿದ್ದಾನೆ ಎಂದು ಹಿಂದೂ ಯುವಕರ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪದಲ್ಲಿ ಸುಳ್ಯ ಪೊಲೀಸರು ಆರೋಪಿತ ಯುವಕರನ್ನು ವಶಕ್ಕೆ ಪಡೆದಿದ್ದು, ವಿಷಯ ಸುದ್ದಿಯಾಗುತ್ತಲೇ ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಠಾಣೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಬಗ್ಗೆ ವರದಿಯಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಕೇರಳ ಮೂಲದ ಯುವಕನೋರ್ವ ಸುಳ್ಯದ ಅರಂತೋಡು ಎಂಬಲ್ಲಿ ಕೃಷಿ ಚಟುವಟಿಕೆ ನಡೆಸಿಕೊಂಡಿದ್ದು, ನಿನ್ನೆ ಕೇರಳ ಮೂಲದ ಹಿಂದೂ ಯುವತಿಯನ್ನು ಕಾರಿನಲ್ಲಿ ಕುಳ್ಳಿರಿಸಿಕೊಂಡು ಸುತ್ತಾಟ ನಡೆಸಿರುವುದು ಹಿಂದೂ ಯುವಕರ ಕೆಂಗಣ್ಣಿಗೆ ಗುರಿಯಾಗಿತ್ತು. ಮಧ್ಯಾಹ್ನದ ಬಳಿಕ ಆಕೆಯನ್ನು ಬಸ್ ನಿಲ್ದಾಣಕ್ಕೆ ಬಿಟ್ಟು ಹಿಂದಿರುಗುತ್ತಿದ್ದ ಯುವಕನನ್ನು ಹಿಂದೂ ಯುವಕರ ತಂಡವೊಂದು ತಡೆದು ಹಲ್ಲೆ ನಡೆಸಿದ್ದು, ಗಾಯಗೊಂಡ ಯುವಕ ಪೊಲೀಸರಿಗೆ ದೂರು ನೀಡಿದ್ದ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಯುವಕನ ದೂರಿನ ಆಧಾರದಲ್ಲಿ ಪೊಲೀಸರು ಕೆಲ ಹಿಂದೂ ಯುವಕರನ್ನು ವಶಕ್ಕೆ ಪಡೆದ ಬೆನ್ನಲ್ಲೇ ವಿಚಾರ ಕೆಲವು ನಾಯಕರ ಕಿವಿಗೆ ಬಿದ್ದಿತ್ತು. ತಕ್ಷಣ ಅರುಣ್ ಕುಮಾರ್ ಪುತ್ತಿಲ ಪುತ್ತೂರಿನಿಂದ ಸುಳ್ಯಕ್ಕೆ ಬಂದು ಠಾಣೆಗೆ ತೆರಳಿ ಮಾತುಕತೆ ನಡೆಸುವ ಮೂಲಕ ಬಂಧನಕ್ಕೊಳಗಾದ ಯುವಕರನ್ನು ಠಾಣೆಯಿಂದ ಬಿಡುಗಡೆಗೊಳಿಸುವಂತೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.