Recent Posts

Monday, January 20, 2025
ಕ್ರೈಮ್ಸುದ್ದಿಸುಳ್ಯ

ಸುಳ್ಯ : ಯುವತಿಯನ್ನು ಕರೆದುಕೊಂಡು ಹೋದ ವಿಚಾರವಾಗಿ ಹಲ್ಲೆ ಪ್ರಕರಣ : ಐವರ ವಿರುದ್ಧ ಕೇಸ್ ದಾಖಲು ; ಓರ್ವ ಅರೆಸ್ಟ್ ..!!! – ಕಹಳೆ ನ್ಯೂಸ್

ಸುಳ್ಯ : ಪರಿಚಯದ ಯುವತಿಯೋರ್ವಳನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಹೋದ ವಿಷಯವಾಗಿ ಯುವಕರ ತಂಡವೊಂದು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ವ್ಯಕ್ತಿಯೋರ್ವರು ಸುಳ್ಯ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ.

ಕೇರಳ ಮಲಪುರಂ ನಿವಾಸಿ ಮೊಹಮ್ಮದ್ ಜಲೀಲ್ (39) ನೀಡಿದ ದೂರಿನ ಮೇರೆಗೆ ಲತೀಶ್ ಗುಂಡ್ಯ, ವರ್ಷಿತ್, ಪುನೀತ್ ಹಾಗೂ ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೇರಳ ಮಲಪುರಂ ನಿವಾಸಿ ಮೊಹಮ್ಮದ್ ಜಲೀಲ್ ಪ್ರಸ್ತುತ ಸುಳ್ಯ ತಾಲೂಕು ಅರಂತೋಡಿನಲ್ಲಿ ರಬ್ಬರ್ ತೋಟವನ್ನು ಕಳೆದ 3 ತಿಂಗಳ ಹಿಂದೆ ಗುತ್ತಿಗೆ ಪಡೆದು ಅರಂತೋಡಿನಲ್ಲಿ ವಾಸವಾಗಿದ್ದು, ಆ.12 ರಂದು ತನ್ನ ಪರಿಚಯದ ಯುವತಿಯೋರ್ವಳು ತಾನು ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದು, ತನಗೆ ವಿಶ್ರಾಂತಿ ಪಡೆಯಲು ರೂಮ್ ಬೇಕೆಂದು ಕೇಳಿಕೊಂಡ ಮೇರೆಗೆ ಜಲೀಲ್ ಸುಳ್ಯದಲ್ಲಿ ರೂಂ ವ್ಯವಸ್ಥೆ ಮಾಡಿ ಬಳಿಕ ವೈಯಕ್ತಿಕ ಕೆಲಸ ನಿಮಿತ್ತ ಸುಳ್ಯ ತಾಲೂಕು ತೋಡಿಕಾನಕ್ಕೆ ತೆರಳಿದ್ದಾಗ 5 ಜನರು ಕಾರು ಮತ್ತು ಸ್ಕೂಟರ್ ಮೂಲಕ ಜಲೀಲ್ ಕಾರನ್ನು ಪಡೆದು ಜಲೀಲ್ ರವರಿಗೆ ಅವ್ಯಾಚವಾಗಿ ಬೈದು ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿ ತೆರಳಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸದರಿ ದೂರಿನ ಮೇರೆಗೆ ಸುಳ್ಯ ಪೆÇಲೀಸ್ ಠಾಣೆಯಲ್ಲಿ ಅ.ಕ್ರ 87/2023 ಕಲಂ 143, 147, 341, 323, 504, 506, 153(ಂ) ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಆರೋಪಿಗಳ ಪೈಕಿ ಸುಳ್ಯ ಸೊಣಂಗೇರಿ ನಿವಾಸಿ ಪುನೀತ್ ಎಂಬಾತನನ್ನು ಬಂಧಿಸಿದ್ದು, ತನಿಖೆ ನಡೆಸಲಾಗುತ್ತಿದೆ..