Monday, November 25, 2024
ಸುದ್ದಿ

‘ಉಚಿತ ವಿದ್ಯುತ್ ಭಾಗ್ಯ’ ಅಲ್ಲ ಮರ‍್ರೆ.. ಇದು ‘ಕತ್ತಲೆ ಭಾಗ್ಯ’ : ಪದೇ ಪದೇ ವಿದ್ಯುತ್ ಕಡಿತ ಜನರ ಆಕ್ರೋಶ – ಕಹಳೆ ನ್ಯೂಸ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು, ತಾವು ಘೋಷಣೆ ಮಾಡಿದ ೫ ಉಚಿತ ಭಾಗ್ಯಗಳಲ್ಲಿ ಒಂದಾದ ೨೦೦ ಯೂನಿಟ್‌ವರೆಗೆ ಉಚಿತ ವಿದ್ಯುತ್ ಭಾಗ್ಯ ಏನೋ ಸಿಕ್ಕಿದೆ. ಸದ್ಯಕ್ಕೆ ಫ್ರೀ ಕರೆಂಟ್ ಹಾಗಾಗಿ ಬಿಲ್ ಕಟ್ಟಬೇಕಾಗಿಲ್ಲ. ಆದ್ರೆ ಈಗ ಹೊಸ ತಲೆ ನೋವು ಜನರನ್ನ ಕಾಡುತ್ತಿದೆ. ಹೌದು ಅನಿಯಮಿತ ಲೋಡ್ ಶೆಡ್ಡಿಂಗ್ ಮಾಡುವ ಪದೇ ಪದೇ ವಿದ್ಯುತ್ ಕಡಿತ ಮಾಡುತ್ತಿದ್ದು, ಮೆಸ್ಕಾಂ ವಿರುದ್ದ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ಒಂದು ವಾರದಿಂದ ರಾತ್ರಿ ಯಾವುದೇ ಪೂರ್ವ ಸೂಚನೆ ಇಲ್ಲದೆ ವಿದ್ಯುತ್ ಕಡಿತ ಮಾಡಲಾಗುತ್ತಿದೆ ಎಂದು ನಗರದ ವಿವಿಧ ಕಡೆಗಳಿಂದ ನಾಗರಿಕರು ದೂರುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಾಮಾನ್ಯವಾಗಿ ವಿದ್ಯುತ್ ಕಡಿತ ಇರುವಾಗ ಮೆಸ್ಕಾಂ ಸಕಾರಣ ಸಹಿತ ಪೂರ್ವ ಪ್ರಕಟನೆ ನೀಡುತ್ತದೆ. ಆದರೆ ಪ್ರಸ್ತುತ ಅನಿಯಮಿತವಾಗಿ ಅದರಲ್ಲೂ ರಾತ್ರಿ ಹೊತ್ತು ವಿದ್ಯುತ್ ಕಡಿತ ಮಾಡಲಾಗುತ್ತಿದೆ. ನಗರದಲ್ಲಿ ಬಹುತೇಕ ಎಲ್ಲ ಪ್ರದೇಶಗಳಲ್ಲೂ ವಿದ್ಯುತ್ ಕಡಿತ ಕಳೆದ ವಾರದಿಂದ ಆಗುತ್ತಿದೆ. ಕೈಗಾರಿಕಾ ಪ್ರದೇಶದಲ್ಲೂ ವಿದ್ಯುತ್ ಕಡಿತವಾಗುತ್ತಿದೆ ಎಂದು ಕೆಲವರು ಮಾಹಿತಿ ನೀಡಿದ್ದಾರೆ.
ಇನ್ನು ಈ ಬಗ್ಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರಕಾರದಿಂದ ಕತ್ತಲೆ ಗ್ಯಾರಂಟಿ ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದಲ್ಲಿ ಉಚಿತ ಗ್ಯಾರಂಟಿಗಳ ಮೂಲಕ ಜನರನ್ನು ಮರಳು ಮಾಡುತ್ತಿರುವ ಕಾಂಗ್ರೆಸ್ ಸರಕಾರ ಇದೀಗ ಉಚಿತ ವಿದ್ಯುತ್ ನೀಡಿ, ಇನ್ನೊಂದು ಕಡೆಯಿಂದ ಅನಧಿಕೃತವಾಗಿ ಲೋಡ್ ಶೆಡ್ಡಿಂಗ್ ಮಾಡುವ ಮೂಲಕ ಜನರನ್ನು ವಂಚಿಸುತ್ತಿದೆ.

ಕಳೆದೊAದು ವಾರದಿಂದ ರಾತ್ರಿ ಪೀಕ್ ಅವರ್ ನಲ್ಲಿ ವಿದ್ಯುತ್ ಕಡಿತ ಮಾಡುತ್ತಿದ್ದು, ಗ್ರಾಹಕರಿಗೆ ತೀವ್ರ ಸಮಸ್ಯೆಯಾಗುತ್ತಿದೆ. ವಿದ್ಯಾರ್ಥಿಗಳಿಗೆ ರಾತ್ರಿ ಓದು, ಬರಹಕ್ಕೆ ಸಮಸ್ಯೆಯಾದರೆ, ಗೃಹಿಣಿಯರಿಗೆ ರಾತ್ರಿ ಅಡುಗೆ ಮಾಡಲು ಆಗುತ್ತಿಲ್ಲ. ಇನ್ನು ವಿದ್ಯುತ್ ಅನ್ನು ನಂಬಿ ಸಣ್ಣಪುಟ್ಟ ಉದ್ದಿಮೆ ನಡೆಸುವವರ ಬದುಕಿಗೆ ಸರಕಾರ ಕೊಳ್ಳಿ ಇಡಲು ಹೊರಟಿದೆ. ನಾವು ಉಚಿತ ವಿದ್ಯುತ್ ನೀಡಿದ್ದೇವೆ ಎಂದು ಒಂದೆಡೆಯಿAದ ಸರಕಾರ ಬೀಗುತ್ತಿದ್ದರೆ, ಇನ್ನೊಂದೆಡೆಯಿAದ ವಿದ್ಯುತ್ ಕಡಿತ ಮಾಡುವ ಮೂಲಕ ಗ್ರಾಹಕರನ್ನು ಮೂರ್ಖರನ್ನಾಗಿಸುತ್ತಿದೆ ಎಂದು ಅವರು ದೂರಿದ್ದಾರೆ.

ಉಚಿತ ಗ್ಯಾರಂಟಿ ನೀಡುವ ಸಲುವಾಗಿ ಸರಕಾರಕ್ಕೆ ದೊಡ್ಡ ಹೊರೆಯಾಗುತ್ತಿದ್ದು, ಇದನ್ನು ತಪ್ಪಿಸುವ ಸಲುವಾಗಿ ರಾಜ್ಯ ಸರಕಾರವೇ ಅನಧಿಕೃತವಾಗಿ ಲೋಡ್ ಶೆಡ್ಡಿಂಗ್ ಮಾಡಲು ಎಸ್ಕಾಂಗಳಿಗೆ ಸೂಚನೆ ನೀಡಿದೆ ಎಂಬ ಮಾಹಿತಿ ಇದೆ. ಉಚಿತಗಳನ್ನು ನೀಡುವ ಸಲುವಾಗಿ ಬೆಲೆ ಹೆಚ್ಚಳ ಮಾಡಿರುವ ಸರಕಾರ ಇದೀಗ ಹಿಂಬಾಗಿಲ ಮೂಲಕ ವೆಚ್ಚ ಕಡಿತಕ್ಕೆ ಇಳಿದಿದ್ದು, ಈ ಮೂಲಕ ಇಡೀ ವ್ಯವಸ್ಥೆಯನ್ನೇ ದುರ್ಬಳಕೆ ಮಾಡಿ ಜನಸಾಮಾನ್ಯರಿಗೆ ಮೋಸ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಸಾಮಾನ್ಯವಾಗಿ ಜಲಾಶಯಗಳಲ್ಲಿ ನೀರಿನ ಕೊರತೆ ಉಂಟಾದಾಗ ಅಥವಾ ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಯವಾದಾಗ ತಾತ್ಕಾಲಿಕವಾಗಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ. ಇನ್ನು ಬೇಸಿಗೆ ಅವಧಿಯಲ್ಲಿ ವಿದ್ಯುತ್ ಬಳಕೆ ಹೆಚ್ಚಾದಾಗ ವಿದ್ಯುತ್ ವಿತರಣೆ ವ್ಯವಸ್ಥೆಯನ್ನು ಸರಿದೂಗಿಸುವ ಸಲುವಾಗಿ ಹಂತ ಹಂತವಾಗಿ ಲೋಡ್ ಶೆಡ್ಡಿಂಗ್ ಮಾಡುವುದು ಸಾಮಾನ್ಯ. ಆದರೆ ಮಳೆಗಾಲದಲ್ಲೇ ಅನಧಿಕೃತ ಲೋಡ್ ಶೆಡ್ಡಿಂಗ್ ಮಾಡಲು ರಾಜ್ಯ ಸರಕಾರ ಸೂಚನೆ ನೀಡುವ ಮೂಲಕ ಜನರ ಬದುಕನ್ನು ಕಸಿಯಲು ಹೊರಟಂತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.