Recent Posts

Tuesday, November 26, 2024
ಸುದ್ದಿ

ಗೋ ಹತ್ಯೆ, ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆದರೆ ವಿಧಾನಸೌಧಕ್ಕೆ ಮುತ್ತಿಗೆ : ರಾಷ್ಟ್ರೀಯ ಸಂತ ಸಂಘ ನಿರ್ದೇಶಕ ಪರಮಾತ್ಮ ಜಿ. ಮಹರಾಜ್ ಆಕ್ರೋಶ – ಕಹಳೆ ನ್ಯೂಸ್

ಬಿಜೆಪಿ ಸರಕಾರ ಜಾರಿಗೊಳಿಸಿದ ಗೋ ಹತ್ಯೆ, ಮತಾಂತರ ನಿಷೇಧ ಕಾಯ್ದೆಯನ್ನು ಈ ಬಾರಿಯ ಕಾಂಗ್ರೆಸ್ ಸರಕಾರ ವಾಪಸ್ ತೆಗೆದುಕೊಳ್ಳುವ ಕುರಿತು ಚಿಂತನೆ ನಡೆಸಿದ್ದು, ಇದಕ್ಕೆ ರಾಷ್ಟ್ರೀಯ ಸಂತ ಸಂಘದ ನಿರ್ದೇಶಕ ಪರಮಾತ್ಮ ಜಿ. ಮಹರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಮಹಾರಾಜ್, ಗೋ ಹತ್ಯೆ ಮತ್ತು ಮತಾಂತರ ನಿಷೇಧ ಕಾಯ್ದೆ ವಾಪಾಸ್ ತೆಗೆದುಕೊಂಡರೆ ಸಂತರೇ ವಿಧಾನಸಭೆಗೆ ಮುತ್ತಿಗೆ ಹಾಕಲಿದ್ದಾರೆ. ಸರಕಾರ ಯಾವುದೇ ಕಾರಣಕ್ಕೂ ಈ ಕಾಯ್ದೆಗಳನ್ನು ಹಿಂಪಡೆಯಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಶ್ವ ಹಿಂದೂ ಪರಿಷತ್ ವತಿಯಿಂದ ಮೇಲುಕೋಟೆಯ 41 ಪೀಠಾಧೀಶರಾದ ಯದುಗಿರಿ ಯತಿರಾಜ ನಾರಾಯಣ ರಾಮನುಜ ಜೀಯರ್ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದ ಸಂತ ಸಮಾವೇಶದಲ್ಲಿ ಅವರು ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಹಿಂದೂ ಧರ್ಮ, ಸಂಸ್ಕøತಿ, ಸಂಪ್ರದಾಯ, ಧರ್ಮ ಕಾಪಾಡುವ ಬಗ್ಗೆ ಸಮಾವೇಶದಲ್ಲಿ ಚರ್ಚೆ ನಡೆದಿದೆ. ಅವರವರ ಧರ್ಮವನ್ನು ಪಾಲಿಸಲಿ. ಆದರೆ ಮತಾಂತರ ಮಾಡಬಾರದು ಎಂದು ಶಾಸಕ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಲವ್ ಜಿಹಾದ್ ಗೆ ಸರಕಾರ ಅವಕಾಶ ನೀಡಬಾರದು. ಬಡತನದ ನೆಪವಾಗಿಸಿಕೊಂಡು ಮತಾಂತರ ಮಾಡುವುದನ್ನು ತಡೆಯಬೇಕು. ಕಾನೂನು ಪ್ರಕಾರ ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಕಾನೂನು ತರಲಾಗಿದೆ. ಅದನ್ನು ಸರಕಾರ ಮುಂದುವರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.