Thursday, January 23, 2025
ಸುದ್ದಿ

ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆ : ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮಲ್ಲಿಕಾ ಅಶೋಕ್ ಪೂಜಾರಿ ಆಯ್ಕೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ಕೋಡಿಂಬಾಡಿ ಗ್ರಾಮ ಪಂಚಾಯತ್ ನ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಂಚಾಯತ್ ನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮಲ್ಲಿಕಾ ಅಶೋಕ್ ಪೂಜಾರಿ, ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಜಯಪ್ರಕಾಶ್ ಬದಿನಾರು ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

11 ಸದಸ್ಯ ಬಲವನ್ನು ಹೊಂದಿರುವ ಗ್ರಾ.ಪಂ. ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ (ಎ) ಮೀಸಲಾತಿ ಬಂದಿದೆ. ಇಲ್ಲಿನ 11 ಮಂದಿ ಸದಸ್ಯರಲ್ಲಿ ಆರು ಮಂದಿ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದು, ಐದು ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇಲ್ಲಿ ಅಧ್ಯಕ್ಷ ಸ್ಥಾ.ನಕ್ಕೆ ಬಿಜೆಪಿ ಬೆಂಬಲಿತ ಸದಸ್ಯೆ ಉಷಾ ಲಕ್ಷ್ಮಣ , ಕಾಂಗ್ರೆಸ್ ಬೆಂಬಲಿತ ಸದಸ್ಯೆ ಮಲ್ಲಿಕಾ ಅಶೋಕ್ ಪೂಜಾರಿ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸದಸ್ಯ ರಾಮಚಂದ್ರ ಪೂಜಾರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜಯಪ್ರಕಾಶ್ ಬದಿನಾರು ನಾಮಪತ್ರ ಸಲ್ಲಿಸಿದ್ದರು.