Wednesday, January 22, 2025
ಸುದ್ದಿ

ಭದ್ರಾವತಿ ಹಳೆ ಸೇತುವೆ ಬಳಿ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ– ಕಹಳೆ ನ್ಯೂಸ್

ಶಿವಮೊಗ್ಗ: ಭದ್ರಾವತಿ ಹಳೆ ಸೇತುವೆ ಬಳಿ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಮಂಗಳವಾರ   ನಡೆದಿದೆ. ಸಿದ್ದಾಪುರ ತಾಂಡಾದ ಸುನಿಲ್ ಎಂಬಾತ ಕೃತ್ಯ ಎಸಗಿದ್ದಾನೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಭದ್ರಾವತಿಯ ದೊಡ್ಡೇರಿಯ ನರೇಂದ್ರ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡಿದ್ದ ನರೇಂದ್ರನನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೇ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.