Recent Posts

Monday, January 20, 2025
ಸುದ್ದಿ

ಮಹಿಳೆಯರ ‘ಶಕ್ತಿ ಯೋಜನೆ’ ಸ್ಥಗಿತವಿಲ್ಲ : ಕೆಎಸ್.ಆರ್.ಟಿ.ಸಿ ಸ್ಪಷ್ಟನೆ – ಕಹಳೆ ನ್ಯೂಸ್

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ನಿಲ್ಲಿಸುವುದಾಗಿ ಊಹಾಪೋಹಗಳು ಕೇಳಿಬಂದ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಸ್ಥಗಿತಗೊಳ್ಳಲ್ಲ ಎಂದು ಸ್ಪಷ್ಟನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಮುಂದುವರಿಯುತ್ತೆ. ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕರು ನಂಬಬಾರದು. ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಸ್ಥಗಿತಗೊಳ್ಳಲ್ಲ ಎಂದು ಪ್ರಕಟಣೆ ಯಲ್ಲಿ ತಿಳಿಸಿದೆ. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ” ಎಂದು  ತಿಳಿಸಿದೆ.