Recent Posts

Sunday, January 19, 2025
ಸುದ್ದಿ

ಕೌಟುಂಬಿಕ ಕಲಹ ಹಿನ್ನೆಲೆ ; ವ್ಯಕ್ತಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ – ಕಹಳೆ ನ್ಯೂಸ್

ಬಂಟ್ವಾಳ: ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಪೆರಾಜೆ ಎಂಬಲ್ಲಿ ವ್ಯಕ್ತಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪೆರಾಜೆ ನಿವಾಸಿ ಪ್ರಶಾಂತ್ ನಾಯ್ಕ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ, ಈತ ಕಳೆದ ಒಂದು ವರ್ಷಗಳ ಹಿಂದೆ ಮದುವೆಯಾಗಿದ್ದು. ನೇರಳಕಟ್ಟೆ ಅಗ್ರಿ ಎಂಬ ಸಂಸ್ಥೆಯೊAದರಲ್ಲಿ ಕೆಲಸ ಮಾಡುತ್ತಿದ್ದ ಈತ ಸ್ನೇಹ ಜೀವಿಯಾಗಿದ್ದುಕೊಂಡಿದ್ದ ಮತ್ತು ಬಿಜೆಪಿಯ ಸಕ್ರೀಯ ಕಾರ್ಯಕರ್ತನಾಗಿ, ಪೆರಾಜೆ ಯುವ ವೇದಿಕೆಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದ.
ಕೌಟುಂಬಿಕ ಕಲಹ ಆತ್ಮಹತ್ಯೆಗೆ ಕಾರಣವಾಗಿರಬೇಕು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೋಲೀಸರು ಆಗಮಿಸಿದ್ದು, ಬಂಟ್ವಾಳ ಅಗ್ನಿ ಶಾಮಕ ದಳ ಹಾಗೂ ಗೂಡಿನ ಬಳಿಯ ಮುಳುಗುತಜ್ಞರು ಆಗಮಿಸಿ ಮೃತದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.