Recent Posts

Monday, January 20, 2025
ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ (ರಿ) ವತಿಯಿಂದ ಬೊಳಂತೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲಿನ ಡೈರಿಗೆ 2 ಲಕ್ಷ ರೂ ಧನಸಹಾಯ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ (ರಿ) ಇದರ “ಗ್ರಾಮ ಕಲ್ಯಾಣ ಯೋಜನೆಯ” ಕಾರ್ಯಕ್ರಮ ಅಡಿಯಲ್ಲಿ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಬೊಳಂತೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲಿನ ಡೈರಿಗೆ ಶ್ರೀ ಕ್ಷೇತ್ರದ ಪೂಜ್ಯ ಖಾವಂದರು ೨ ಲಕ್ಷ ರೂಪಾಯಿ ಮಂಜೂರು ಮಾಡಿದ್ದು ಸದರಿ ಮಂಜೂರಿ ಪತ್ರವನ್ನು ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕಿ ಶ್ರೀಮತಿ ಸುಗುಣಶೆಟ್ಟಿ ರವರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ ರೈ ಯವರಿಗೆ ಹಸ್ತಾಂತರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು


ಈ ಸಂದರ್ಭದಲ್ಲಿ ಯೋಜನೆಯ ಕಲ್ಲಡ್ಕ ವಲಯದ ಅಧ್ಯಕ್ಷೆ ಶ್ರೀಮತಿ ತುಳಸಿ, ಬೋಳಂತೂರು ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಸೀತಾ, ಒಕ್ಕೂಟ ಸೇವಾ ಪ್ರತಿನಿಧಿ ಶ್ರೀಮತಿ ಲೀಲಾವತಿ, ಒಕ್ಕೂಟ ಪದಾಧಿಕಾರಿಗಳಾದ ಸುಧಾಮಣಿ, ಬಿ ಮಹಮ್ಮದ್, ಸದಸ್ಯರಾದ ನಾರಾಯಣ ಟೈಲರ್, ಚಂದ್ರಶೇಖರ್, ಹಾಲು ಉತ್ಪಾದಕರ ಸಂಘದ ನಿರ್ದೇಶಕರು, ಕಾರ್ಯದರ್ಶಿ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು