Friday, January 24, 2025
ಸುದ್ದಿ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ-ನಿವೃತ್ತ ಸಬ್ ಇನ್ಸ್ಪೆಕ್ಟರ್ ಬಂಧನ – ಕಹಳೆ ನ್ಯೂಸ್

ಬೆoಗಳೂರು :ನಿವೃತ್ತ ಸಬ್ ಇನ್ಸ್ಪೆಕ್ಟರ್ ಒಬ್ಬರು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಬಂಧನಕ್ಕೊಳಗಾಗಿದ್ದಾರೆ.7  ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ 74 ವರ್ಷದ ನಿವೃತ್ತ ಸಬ್ ಇನ್ಸ್ಪೆಕ್ಟರ್ ಅವರನ್ನು ಶಿವಾಜಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿಯು ಶಿವಾಜಿನಗರ ವ್ಯಾಪ್ತಿಯಲ್ಲಿ ತನ್ನ ಕುಟುಂಬದೊoದಿಗೆ ವಾಸವಿದ್ದು, ಅದೇ ಕಟ್ಟಡದ ಒಂದು ಭಾಗದಲ್ಲಿ ಬಾಲಕಿಯ ಕುಟುಂಬ ವಾಸವಿತ್ತು. ಭಾನುವಾರ ಆರೋಪಿಯು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಆಕೆ ನೋವಿನಿಂದ ಬಳಲುತ್ತಿದ್ದುದನ್ನು ಕುಟುಂಬದವರು ಗಮನಿಸಿದಾಗ ಆರೋಪಿಯ ಕೃತ್ಯ ಬಯಲಾಗಿದೆ.

ತಕ್ಷಣ ನೊಂದ ಬಾಲಕಿಯ ಕುಟುಂಬಸ್ಥರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು ಬಳಿಕ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಂತರ ಬಾಲಕಿಯ ಕಡೆಯವರು, ಅಕ್ಕಪಕ್ಕದ ನಿವಾಸಿಗಳು ಆರೋಪಿಯ ಮನೆ ಮುಂದೆ ಜಮಾಯಿಸಿದ್ದು, ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿತ್ತು. ಪ್ರಕರಣ ದಾಖಲಿಸಿಕೊಂಡ ಶಿವಾಜಿನಗರ ಠಾಣಾ ಪೊಲೀಸರು ಪೋಕ್ಸೋ ಪ್ರಕರಣದಡಿ ಆರೋಪಿಯನ್ನು ಬಂಧಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ತಿಳಿಸಿದ್ದಾರೆ.