ಬಂಟ್ವಾಳ ಬಿಜೆಪಿ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬಿ.ಸಿ.ರೋಡಿನಲ್ಲಿ ನಡೆದ ತಿರಂಗ ಯಾತ್ರೆ ಕಾರ್ಯಕ್ರಮ – ಕಹಳೆ ನ್ಯೂಸ್
ಬಂಟ್ವಾಳ: ಕಾಂತ್ರಿಕಾರಕ-ಅಹಿಂಸಾತ್ಮಕ ಎರಡೂ ಚಳವಳಿಗಳು ಕೂಡ ದೇಶದ ಸ್ವಾತಂತ್ರ್ಯಕ್ಕೆ ಕಾರಣವಾಗಿದ್ದು, ಉಕ್ರೇನ್- ರಾಷ್ಟ್ರದ ಯುದ್ಧದ ಕಾಲದಲ್ಲೂ ಅಲ್ಲಿ ಭಾರತದ ರಾಷ್ಟ್ರ ಧ್ವಜ ಕಂಡಾಗ ಸೈನಿಕರು ಸೆಲ್ಯೂಟ್ ನೀಡಿರುವುದು ದೇಶದ ಗೌರವದ ಸಂಕೇತವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ಆಡಳಿತ ವೈಖರಿಗೆ ಸಾಕ್ಷಿಯಾಗಿದೆ ಎಂದು ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಅವರು ಬಂಟ್ವಾಳ ಬಿಜೆಪಿ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬಿ.ಸಿ.ರೋಡಿನಲ್ಲಿ ನಡೆದ ತಿರಂಗ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಜಗತ್ತಿನ ಆರ್ಥಿಕತೆಯಲ್ಲಿ ಪ್ರಸ್ತುತ 5ನೇ ಸ್ಥಾನದಲ್ಲಿರುವ ಭಾರತ ಮುಂದೆ 3ನೇ ಸ್ಥಾನಕ್ಕೆ ಬರಲಿದೆ ಎಂದು ಪ್ರಧಾನಿ ಮೋದಿಯವರು ಅಮೇರಿಕಾ ಪ್ರವಾಸದಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸಿದ್ದು, 2047ರಲ್ಲಿ ಸ್ವಾತಂತ್ರ್ಯದ ಶತಮಾನಕ್ಕೆ ಜಗತ್ತಿನಲ್ಲೇ ನಂ. 1 ದೇಶವಾಗಲು ಪ್ರತಿ ಭಾರತೀಯ ಕೊಡುಗೆ ಅಗತ್ಯ ಎಂದರು.
ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಮಾತನಾಡಿ, ಭಾರತದ ಸಂಸ್ಕøತಿ, ಪರಂಪರೆಯನ್ನು ಜಗತ್ತೇ ಒಪ್ಪಿಕೊಳ್ಳುವ ರೀತಿಯಲ್ಲಿ ಪ್ರಧಾನಮಂತ್ರಿಗಳು ದೇಶವನ್ನು ಬೆಳೆಸಿದ್ದು, ಅವರ 20 ಗಂಟೆಗಳ ನಿಸ್ವಾರ್ಥ ದೇಶಸೇವೆಯೇ ನಮ್ಮೆಲ್ಲರಿಗೂ ಪ್ರೇರಣೆ ಎಂದರು.
ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಜಿಲ್ಲಾ ಮಾಧ್ಯಮ ಪ್ರಮುಖ್ ಸಂದೇಶ್ ಶೆಟ್ಟಿ, ಬೂಡಾ ಮಾಜಿ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷ ಕಿಶೋರ್ ಪಲ್ಲಿಪಾಡಿ ಉಪಸ್ಥಿತರಿದ್ದರು. ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ ಸ್ವಾಗತಿಸಿ, ರವೀಶ್ ಶೆಟ್ಟಿ ಕರ್ಕಳ ವಂದಿಸಿದರು.