Sunday, November 24, 2024
ರಾಜ್ಯವಾಣಿಜ್ಯಸುದ್ದಿ

ಹಣದುಬ್ಬರ ಇಳಿಸಲು ಕೇಂದ್ರದಿಂದ ಮತ್ತೊಂದು ಮಹತ್ವದ ನಿರ್ಧಾರ..! : ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ..! – ಕಹಳೆ ನ್ಯೂಸ್

ಆ.15 ಸ್ವಾತಂತ್ರ್ಯೋತ್ಸವದಂದು ಕೆಂಪುಕೋಟೆಯಲ್ಲಿ ಭಾಷಣ ಮಾಡಿದ  ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಹಣದುಬ್ಬರ ಇಳಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಮತ್ತು ಈ ಪ್ರಕ್ರಿಯೆ ಮುಂದುವರೆಸಲಿದೆ ಎಂದು ಭರವಸೆ ನೀಡಿದ್ದರು. ಅದರ ಬೆನ್ನಲ್ಲೇ ಇದೀಗ ಪೆಟ್ರೋಲ್ ಮತ್ತು ಆಹಾರ ವಸ್ತುಗಳನ್ನು ಅಗ್ಗ ಮಾಡಲು ಮುಂದಾಗಿದೆ ಎಂದು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶೀಘ್ರವಾಗಿ ಪೆಟ್ರೋಲ್ ಮೇಲಿನ ತೆರಿಗೆ ಪ್ರಮಾಣ ಇಳಿಕೆ ಮಾಡಲು ಕೇಂದ್ರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ದಿನಗಳಲ್ಲಿ ಟೊಮೆಟೋ, ತರಕಾರಿ, ಹಣ್ಣು ಸೇರಿದಂತೆ ಹಲವು ಅಗತ್ಯ ವಸ್ತುಗಳ ಬೆಲೆ ಗಗನಕ್ಕೆರಿ ಕುಳಿತಿದೆ. ಪರಿಣಾಮ ಕಳೆದ ಜುಲೈ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣ ಶೇ.7.44ಕ್ಕೆ ತಲುಪಿತ್ತು. ಇದು ಕಳೆದ 15 ತಿಂಗಳಲ್ಲೆ ಗರಿಷ್ಠ ಪ್ರಮಾಣವಾಗಿತ್ತು. ಜೊತೆಗೆ ಹಿಂದಿನ ಜೂನ್ ತಿಂಗಳಿಗೆ ಹೋಲಿಸಿದರೆ ಶೇ.2.63ರಷ್ಟು ಭಾರೀ ಏರಿಕೆಯಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಹೆಚ್ಚುತ್ತಿರುವ ಹಣದುಬ್ಬರದಿಂದ ಹೈರಾಣಾಗಿರುವ ಜನಸಾಮಾನ್ಯರನ್ನು ಬೆಲೆ ಏರಿಕೆಯ ಬಿಸಿಯಿಂದ ತಡೆಗಟ್ಟಲು ಕೇಂದ್ರ ಸರ್ಕಾರ ಶೀಘ್ರ ಪೆಟ್ರೋಲ್ ಮೇಲಿನ ತೆರಿಗೆ ಪ್ರಮಾಣ ಇಳಿಕೆ ಮಾಡಲು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಗೋಧಿ ಮತ್ತು ಖಾದ್ಯ ತೈಲದ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡುವ ಸಾಧ್ಯತೆ ಇದೆ ಎಂದು ಅವು ಹೇಳಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು