ದೇವಸ್ಥಾನಗಳ ಜೀರ್ಣೋದ್ಧಾರ ಅನುದಾನಕ್ಕೆ ತಡೆ..! : ಹಿಂದೂ ಪಡೆ ಕೆರಳುವ ಮುನ್ನವೇ ಆದೇಶ ವಾಪಾಸ್ ಪಡೆದ ಸರ್ಕಾರ –ಕಹಳೆ ನ್ಯೂಸ್
ದೇವಸ್ಥಾನಗಳ ಜೀರ್ಣೋದ್ಧಾರ ಅನುದಾನಕ್ಕೆ ತಡೆ ನೀಡುವಂತೆ ರಾಜ್ಯ ಸರ್ಕಾರ ಆದೇಶ ನೀಡಿದ್ದು, ಇದೀಗ ಅನುದಾನ ತಡೆ ಹಿಡಿದು ಆದೇಶ ಹೊರಡಿಸಿರುವ ವಿಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಎಚ್ಚೆತ್ತುಕೊಂಡಿದ್ದು, ಕೂಡಲೇ ಅನುದಾನಕ್ಕೆ ತಡೆ ನೀಡಿದ್ದ ಆದೇಶ ಹಿಂಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ದೇವಸ್ಥಾನಗಳ ಜೀರ್ಣೋದ್ಧಾರ ಅನುದಾನಕ್ಕೆ ತಡೆ ನೀಡುವಂತೆ ಆದೇಶ ನೀಡಿದ ರಾಜ್ಯ ಸರ್ಕಾರ 3 ವಿಚಾರಗಳನ್ನ ಪ್ರಸ್ತಾಪಿಸಿತ್ತು.
1. ಸರ್ಕಾರದಿಂದ ದೇವಾಲಯಗಳ ಅಭಿವೃದ್ಧಿ/ಜೀರ್ಣೋದ್ದಾರಕ್ಕಾಗಿ/ ಸಾಮಾನ್ಯ ಯೋಜನೆ ಅಡಿಯಲ್ಲಿ ಅನುದಾನ ಮುಂಜೂರಾಗಿದೆ. ಈ ಕಾಮಗಾರಿಗಳನ್ನು ಪ್ರಾರಂಭಿಸದೇ ಇರುವ ಸಂಸ್ಥೆಗಳಿಗೆ ಮುಂದಿನ ನಿರ್ದೇಶನದವರೆಗೂ ಹಣ ಬಿಡುಗಡೆ ಮಾಡಬಾರದು.
2. 2022-23ನೇ ಸಾಲಿನಲ್ಲಿ ಮುಂಜೂರಾಗಿರುವ ಅನುದಾನದ ಪೈಕೆ ಈಗಾಗಲೇ ಶೇಕಡಾ 50 ರಷ್ಟು ಹಣ ಬಿಡುಗಡೆಯಾಗಿ ಆಡಳಿತಾತ್ಮಕ ಮಂಜೂರಾತಿ ನೀಡಿದ್ದು, ಹಣ ಬಿಡುಗಡೆ ಮಾಡದಿದ್ದಲ್ಲಿ ಸದರಿ ಕಾಮಗಾರಿಗೆ ಹಣವನ್ನು ಬಿಡುಗಡೆ ಮಾಡಬಾರದು. ಹಾಗೂ ಕಾಮಗಾರಿಯನ್ನು ಪ್ರಾರಂಭಿಸದೇ ಇದ್ದಲ್ಲಿ ಕಾಮಗಾರಿಯನ್ನು ಪ್ರಾರಂಭಿಸತಕ್ಕದ್ದಲ್ಲ.
3. ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸ್ವೀಕೃತವಾಗಿದ್ದಲ್ಲಿ ಆಡಳಿತಾತ್ಮಕ ಮಂಜೂರಾತಿಯನ್ನು ಮುಂದಿನ ನಿರ್ದೇಶನದವರೆಗೆ ತಡೆಹಿಡಿಯುವುದು ಎಂದು ಆದೇಶದಲ್ಲಿ ತಿಳಿಸಲಾಗಿತ್ತು.
ಕರ್ನಾಟಕದ ದೇವಸ್ಥಾನಗಳ ಜೀರ್ಣೋದ್ದಾರ ಅನುದಾನ ತಡೆ ಹಿಡಿದು ಆದೇಶ ಹೊರಡಿಸಿರುವುದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಎಚ್ಚೆತ್ತುಕೊಂಡಿದ್ದು, ಕೂಡಲೇ ಅನುದಾನಕ್ಕೆ ತಡೆ ನೀಡಿದ್ದ ಆದೇಶ ಹಿಂಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ, ದೇಗುಲಗಳ ಅನುದಾನಕ್ಕೆ ತಡೆ ನೀಡಿದ್ದ ಆದೇಶ ವಾಪಸ್ ಪಡೆಯುವಂತೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಮುಜರಾಯಿ ಇಲಾಖೆ ಆಯುಕ್ತರು ಕನ್‌ಫ್ಯೂಸ್ ಆಗಿದ್ದಾರೆ ಅಷ್ಟೇ. ಇಲಾಖೆಯಲ್ಲಿ ಅಕ್ರಮ ನಡೆದಿದೆ ಎಂಬ ಯಾವ ಅನುಮಾನವೂ ಇಲ್ಲ. ಯಾವ ದೇವಸ್ಥಾನದ ಕೆಲಸವನ್ನೂ ನಿಲ್ಲಿಸುವುದಕ್ಕೆ ಹೋಗುವುದಿಲ್ಲ. ಸ್ಟೇಟಸ್ ರಿಪೋರ್ಟ್ ಕೇಳಿದ್ದಕ್ಕೆ ಕನ್‌ಫ್ಯೂಸ್ ಮಾಡಿಕೊಂಡಿಕೊoಡು ನಮ್ಮ ಇಲಾಖೆಯ ಆಯುಕ್ತರು ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದರು.
ದೇವಸ್ಥಾನ ಜೀರ್ಣೋದ್ದಾರ ಕಾಮಗಾರಿ ಇನ್ನೂ ಪ್ರಾರಂಭ ಆಗದಿದ್ದರೆ ಹಣ ಬಿಡುಗಡೆ ಮಾಡದಂತೆ ಧಾರ್ಮಿಕ ದತ್ತಿ ಇಲಾಖೆ ಆದೇಶದಲ್ಲಿ ಸೂಚಿಸಿತ್ತು. ಇನ್ನು ಶೇ.50 ರಷ್ಟು ಹಣ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರೆ ಅದನ್ನು ತಕ್ಷಣ ತಡೆ ಹಿಡಿದು ಅನುದಾನ ಬಿಡುಗಡೆ ಮಾಡದಂತೆ ತಿಳಿಸಿತ್ತು. ಹಾಗೂ ಅನುದಾನದ ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಕೆ ಆಗಿದ್ದರೆ ಆಡಳಿತಾತ್ಮಕ ಮಂಜೂರಾತಿಯನ್ನು ತಡೆಹಿಡಿಯುವುದು. ಹೀಗೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಮೂರು ನಿರ್ದೇಶನಗಳನ್ನು ಎಲ್ಲಾ ಜಿಲ್ಲಾಧಿಕಾರಿಗಳಿಗೆ ನೀಡಲಾಗಿತ್ತು. ಇದರೊಂದಿಗೆ ಈ ಆದೇಶ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಬಗ್ಗೆ ಪ್ರತಿಭಟನೆ ನಡೆಸಲು ಬಿಜೆಪಿ ನಾಯಕರು ಸಿದ್ಧತೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ ರಾಮಲಿಂಗಾರೆಡ್ಡಿ ಅವರು ಆದೇಶ ವಾಪಸ್ ಪಡೆದುಕೊಳ್ಳುವಂತೆ ದತ್ತಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.