Sunday, November 24, 2024
ಸುದ್ದಿ

ಧಾರವಾಡ ಜಿಲ್ಲೆಯಲ್ಲೊಂದು ಅಚ್ಚರಿಯ ಘಟನೆ: ಆಸ್ಪತ್ರೆಯಲ್ಲಿ ಮೃತನಾದ ಬಾಲಕ, ಸ್ಮಶಾನದಲ್ಲಿ ಜೀವಂತ!

ಅನಾರೋಗ್ಯದಿಂದ ಒಂದೂವರೆ ವರ್ಷದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತು. ಆದ್ರೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಮಗು ಮೃತಪಟ್ಟಿದೆ ಎಂದು ತಿಳಿಸಿದ ಬಳಿಕ ಒಂದೂವರೆ ವರ್ಷದ ಮಗುವನ್ನು ಅಂತ್ಯಕ್ರಿಯೆಗೆAದು ಸ್ಮಶಾನಕ್ಕೆ ತೆಗೆದುಕೊಂಡು ಹೋದಾಗ ಕೈಕಾಲು ಅಲುಗಾಡಿಸಿದ ವಿಚಿತ್ರ ಘಟನೆ ಧಾರವಾಡದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಸವರಾಜ್ ಎಂಬ ಒಂದೂವರೆ ವರ್ಷದ ಮಗು ಮೃತಪಟ್ಟಿದೆ ಎಂದು ಹುಬ್ಬಳ್ಳಿ ಕಿಮ್ಸ್ ವೈದ್ಯರು ತಿಳಿಸಿದ್ದರು. ಅನಾರೋಗ್ಯದ ಕಾರಣ ಆಗಸ್ಟ್ 13 ರಂದು ಮಗುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕ್ಸಿಜನ್ ತೆಗೆದರೆ ಮಗು ಸಾವನ್ನಪ್ಪಬಹುದು ಎಂದು ವೈದ್ಯರು ಹೇಳಿದ್ದರು.
ಆದರೆ ಗುರುವಾರ ಮಗು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ ಹಿನ್ನೆಲೆ ಮಗುವಿನ ಪೋಷಕರು ಮಗುವನ್ನು ತಮ್ಮ ಗ್ರಾಮಕ್ಕೆ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿದ್ದಾರೆ.

ಅಂತ್ಯಕ್ರಿಯೆ ಮಾಡುವ ಸಂದರ್ಭ ಬಾಯಿಗೆ ನೀರು ಹಾಕಿದ್ದೇ ತಡ ಮಗು ಕೈಕಾಲು ಅಲುಗಾಡಿಸಿದೆ. ತಕ್ಷಣ ಮಗು ಜೀವಂತವಾಗಿದೆ ಎಂದು ಖುಷಿಯಿಂದ ಪೋಷಕರು ಮತ್ತೆ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಸದ್ಯ ಮಗುವಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.