ಕೇರಳ : ಜನಪ್ರಿಯ ಲುಲು ಮಾಲ್ ನಲ್ಲಿ ಮಹಿಳೆಯಂತೆ ಬುರ್ಖಾ ಧರಿಸಿ ಮಹಿಳೆಯರ ವಾಶ್ ರೂಮ್ ಗೆ ತೆರಳಿ ಕ್ಯಾಮೆರಾ ಇರಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೊಬೈಲ್ ಫೋನ್ ನಲ್ಲಿ ವೀಡಿಯೋ ರೆಕಾರ್ಡ್ ಮಾಡಿದ ಆರೋಪಿ 23 ವರ್ಷದ ಐಟಿ ಉದ್ಯೋಗಿಯಾಗಿದ್ದು, ಆತನ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 66 ಇ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿ ತನ್ನ ಫೋನ್‍ನ್ನು ಸಣ್ಣ ರಟ್ಟಿನ ಬಾಕ್ಸ್ ನಲ್ಲಿ ಇರಿಸಿದ್ದ. ದೃಶ್ಯಗಳನ್ನು ರೆಕಾರ್ಡ್ ಮಾಡಲು ಕ್ಯಾಮೆರಾ ಬಳಿ ರಂಧ್ರ ಮಾಡಿ ಅದನ್ನು ವಾಶ್ ರೂಂನ ಬಾಗಿಲಿಗೆ ಅಂಟಿಸಿದ್ದ. ಬಳಿಕ ಆತ ಬಾಗಿಲಿನ ಮುಂದೆ ನಿಂತಿದ್ದ. ಆತನ ಅನುಮಾನಾಸ್ಪದ ವರ್ತನೆಯ ಮೇಲೆ ಮಾಲ್ ನ ಭದ್ರತಾ ಸಿಬ್ಬಂದಿ ವಿಚಾರಿಸಿದ್ದಾರೆ. ಬಳಿಕ ಮೊಬೈಲ್ ವಶಕ್ಕೆ ಪಡೆದು ಪರಿಶೀಲಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿ ಈ ಹಿಂದೆ ಈ ರೀತಿಯ ಕೃತ್ಯ ಎಸಗಿರುವ ಬಗ್ಗೆ ಪರಿಶೀಲಿಸಲಾಗಿದೆ.