Sunday, November 24, 2024
ಸುದ್ದಿ

ಸಂಸಾರದಲ್ಲಿ ಬಿರುಕು ; ʼ ಇನ್ನುಮುಂದೆ ಅರ್ಪಿತಾ ಕರಿಮಣಿ ಮಾಲೀಕ ನಾನಲ್ಲ ಎಂದ ಕಿರಿಕ್ ಕೀರ್ತಿ – ಕಹಳೆ ನ್ಯೂಸ್

ಕಿರಿಕ್ ಕೀರ್ತಿ ಸಂಸಾರದಲ್ಲಿ ಬಿರುಕು ಬಿದ್ದಿರುವ ವಿಷಯ ಬಹಳಷ್ಟು ಸಮಯದಿಂದ ಸುದ್ದಿಯಲ್ಲಿದ್ದರು ಅದರ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಇರಲಿಲ್ಲ. ಆದರೆ ಈ ವಿಚಾರದ ಕುರಿತು ಕಿರಿಕ್ ಕೀರ್ತಿಯವರು ಶುಕ್ರವಾರ ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಮಹತ್ವದ ಘೋಷಣೆ ಮಾಡಿದ್ದಾರೆ. ಇವತ್ತು ನನ್ನ ಮತ್ತು ಅರ್ಪಿತಾ ಜೊತೆಗಿನ ಪತಿ-ಪತ್ನಿಯ ಸಂಬoಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ. ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬoಧ ಇರುವುದಿಲ್ಲ ಹಾಗೂ ಅಧಿಕೃತವಾಗಿ ಇನ್ನುಮುಂದೆ ಕರಿಮಣಿ ಮಾಲೀಕ ನಾನಲ್ಲ” ಎಂದು ಮಾರ್ಮಿಕವಾಗಿ ಅವರು ಅದರಲ್ಲಿ ಬರೆದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರಣ ಇಷ್ಟೇ.. ಅಧಿಕೃತವಾಗಿ ಇನ್ನುಮುಂದೆ ಕರಿಮಣಿ ಮಾಲೀಕ ನಾನಲ್ಲ. ಒಂದೊಳ್ಳೆಯ ಬದುಕು ಅವಳಿಗೂ ಸಿಗಲಿ, ಕಹಿನೆನಪುಗಳು ಮರೆತು ಹೊಸಜೀವನಕ್ಕೆ ನಾಂದಿ ಹಾಡಲಿ, ನನಗೂ ನಿಮ್ಮ ಪ್ರೀತಿ ಹಾರೈಕೆ ಮುಂದುವರಿಯಲಿ’ ಎಂದು ಕಿರಿಕ್ ಕೀರ್ತಿ ಅಧಿಕೃತವಾಗಿ ತಮ್ಮ ವಿಚ್ಛೇದನವನ್ನು ಘೋಷಿಸಿದ್ದಾರೆ.ಈ ಪೋಸ್ಟ್ ಗೆ ಅವರು ‘ಸಕಲವೂ ಸನ್ಮಂಗಳವಾಗಲಿ’ ಎಂದು ಕ್ಯಾಪ್ಶನ್ ಕೊಟ್ಟಿದ್ದಾರೆ. ತಮ್ಮ ಮತ್ತೊಂದು ಪೋಸ್ಟ್ ನಲ್ಲಿ ಅವರು ಪುತ್ರನ ಜೊತೆಗಿರುವ ಫೋಟೋ ಶೇರ್ ಮಾಡಿದ್ದಾರೆ.