Monday, November 25, 2024
ಸುದ್ದಿ

ಬಲ್ಯ ಶ್ರೀಉಮಾಮಹೇಶ್ವರಿ ದೇವಸ್ಥಾನಕ್ಕೆ ಕನ್ನ ಹಾಕಿದ ಕಳ್ಳರು : ಸಿಸಿಟಿವಿ ಡಿವಿಆರ್, ಮಾನಿಟರ್ ನೊಂದಿಗೆ ಪರಾರಿ – ಕಹಳೆ ನ್ಯೂಸ್

ಕಡಬ : ಕಡಬ ತಾಲೂಕಿನ ಬಲ್ಯ ಗ್ರಾಮದ ಶ್ರೀ ಉಮಾಮಹೇಶ್ವರಿ ದೇವಸ್ಥಾನಕ್ಕೆ ನುಗಿದ ಕಳ್ಳರು ದೇವರ ಚಿನ್ನ, ಬೆಳ್ಳಿ, ಆಭರಣ ಹಾಗೂ ದೇವಸ್ಥಾನಕ್ಕೆ ಅಳವಡಿಸಲಾಗಿದ್ದ ಸಿಸಿ ಕ್ಯಾಮರದ ಡಿವಿಆರ್, ಮಾನಿಟರ್ ನೊಂದಿಗೆ ಪರಾರಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು


ದೇವಸ್ಥಾನದ ಅರ್ಚಕ ರವಿಪ್ರಸಾದ್ ಭಟ್ ಬೆಳಿಗ್ಗೆ ಪೂಜೆಗೆಂದು ದೇವಸ್ಥಾನದ ಬಾಗಿಲು ತೆರೆದಾಗ ದೇವಸ್ಥಾನದ ಮುಖ್ಯ ಬಾಗಿಲಿನ ಚಿಲಕವನ್ನು ಹಾನಿ ಮಾಡಿರುವುದು ಬೆಳಕಿಗೆ ಬಂದಿದೆ. ಅರ್ಚಕರು ಪರಿಶೀಲಿಸಿದಾಗ ದೇವರ ಮೂರ್ತಿಗೆ ಹಾಕಲಾದ ಸುಮಾರು ಅಂದಾಜು 35,000 ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿಯ ಆಭರಣಗಳನ್ನು ಹಾಗೂ ದೇವಸ್ಥಾನಕ್ಕೆ ಅಳವಡಿಸಿದ ರೂ 36,000/- ಮೌಲ್ಯದ ಸಿ.ಸಿ ಕ್ಯಾಮರದ ಡಿ.ವಿ.ಆರ್ ಹಾಗೂ ಮಾನಿಟರ್‌ಗಳನ್ನು ಕಳ್ಳರು ಹೊತ್ತೊಯ್ದ ಪ್ರಕರಣ ಬೆಳಕಿಗೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತು ದೇವಸ್ಥಾನದ ಅರ್ಚಕ ರವಿಪ್ರಸಾದ್ ಭಟ್ ಕಡಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಸ್ಥಳಕ್ಕೆ ಠಾಣಾಧಿಕಾರಿ ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸಿದ್ದಾರೆ.