ಮಂಗಳೂರು: ವೆಲ್ಡಿಂಗ್ ಕೆಲಸ ಮಾಡುವ ವೇಳೆ ತಾಂತ್ರಿಕ ಕಾರಣಗಳಿಂದ ಗಂಭೀರ ಗಾಯಗೊಂಡ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿ ಯಾಗದೆ ನಿನ್ನೆ ಮದ್ಯರಾತ್ರಿ ಖಾಸಗಿ ಆಸ್ಪತ್ರೆ ಯಲ್ಲಿ ನಿಧನರಾಗಿದ್ದಾರೆ.
ಕಾಮಾಜೆ ನಿವಾಸಿ ಸುರೇಶ್ ಕುಲಾಲ್ ಅವರು ಮ್ರತ ದುರ್ದೈವಿ. ಸುರೇಶ್ ಕುಲಾಲ್ ಅವರು ಮಂಗಳೂರು ಖಾಸಗಿ ವೆಲ್ಡಿಂಗ್ ಶಾಪ್ ನಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಕಳೆದ ಶುಕ್ರವಾರವೂ ಎಂದಿನಂತೆ ಲೀಕೇಜ್ ಸಮಸ್ಯೆ ಗೆ ಸಂಬಂಧಿಸಿದಂತೆ ಪೆಟ್ರೋಲ್ ಟ್ಯಾಂಕರ್ ಒಂದರ ಮೇಲೆ ಕುಳಿತು ವೆಲ್ಡಂಗ್ ಕೆಲಸ ಮಾಡುತ್ತಿದ್ದರು.
ಆದರೆ ಯಾವುದೋ ತಾಂತ್ರಿಕ ಕಾರಣಗಳಿಂದ ಪೆಟ್ರೋಲ್ ಟ್ಯಾಂಕರ್ ಸ್ಫೋಟ ಗೊಂಡು ಸುರೇಶ್ ಕುಲಾಲ್ ಜೊತೆ ನಾಲ್ವರು ಗಾಯಗೊಂಡಿದ್ದರು. ಗಂಭೀರ ಗಾಯಗೊಂಡ ಸುರೇಶ್ ಕುಲಾಲ್ ಅವರನ್ನು ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಚಿಕಿತ್ಸೆ ಫಲಕಾರಿ ಯಾಗದೆ ನಿನ್ನೆ ಮಧ್ಯರಾತ್ರಿ ನಿಧನರಾಗಿದ್ದಾರೆ ಎಂದು ತಿಳಿಸಿದ್ದಾರೆ. ಮ್ರತರು ಪತ್ನಿ ಹಾಗೂ ಇಬ್ಬರು ಸಣ್ಣ ಪ್ರಾಯದ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮನೆಗೆ ಆಧಾರ ಸ್ತಂಭವಾಗಿದ್ದ ಸುರೇಶ್ ಕುಲಾಲ್ ನಿಧನದಿಂದ ಮನೆ ಸ್ಮಶಾನ ಮೌನವಾಗಿದೆ. ಇವರಿಗೆ ಸಹಾಯ ಹಸ್ತ ಬೇಕಾಗಿದೆ .