Wednesday, January 22, 2025
ಸುದ್ದಿ

ಆಸ್ತಿಗಾಗಿ ಉಪ್ಪಿಟ್ಟಿನಲ್ಲಿ ಗಂಡನಿಗೆ ವಿಷ ಹಾಕಿದ ಪತ್ನಿ; ಪತಿ ಐಸಿಯುಗೆ, ನಾಯಿ-ಬೆಕ್ಕು ಸಾವು – ಕಹಳೆ ನ್ಯೂಸ್

ಬೆಳಗಾವಿ: ಆಸ್ತಿ ಆಸೆಗಾಗಿ ಪತ್ನಿ ತನ್ನ ಗಂಡನಿಗೆ ಉಪ್ಪಿಟ್ಟಿನಲ್ಲಿ ವಿಷ ಬೆರೆಸಿ ಕೊಲೆಗೆ ಯತ್ನಿಸಿರುವ ಘಟನೆ ಬೆಳಗಾವಿಯ ಗೋರಾಬಾಳದಲ್ಲಿ ನಡೆದಿದೆ. ಎರಡು ಎಕರೆ ಜಮೀನನ್ನು ತಮ್ಮ ಹೆಸರಿಗೆ ಮಾಡಿಸಿಕೊಳ್ಳುವ ಉದ್ದೇಶದಿಂದ ಮಹಿಳೆಯೊಬ್ಬಳು, ತನ್ನ ಪತಿಗೆ ಉಪ್ಪಿಟ್ಟಿನಲ್ಲಿ ವಿಷ ಹಾಕಿ ಕೊಲೆಗೆ ಯತ್ನಿಸಿದ ಪ್ರಕರಣ ಪತ್ತೆ ಹಚ್ಚುವಲ್ಲಿ ಸವದತ್ತಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿಷಪೂರಿತ ಉಪ್ಪಿಟ್ಟು ಸೇವಿಸಿ ಅಸ್ವಸ್ಥರಾಗಿದ್ದ ಸವದತ್ತಿ ತಾಲೂಕಿನ ಗೋರಾಬಾಳ ಗ್ರಾಮದ ನಿಂಗಪ್ಪ ಫಕೀರಪ್ಪ ಹಮಾನಿ (35) ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತ್ನಿ ಸಾವಕ್ಕ (32) ಹಾಗೂ ಇವರ ಸಹೋದರ ಫಕೀರಪ್ಪ ಲಕ್ಷ್ಮಣ ಸಿಂಧೋಗಿ (30) ಕೊಲೆಗೆ ಯತ್ನಿಸಿದ ಆರೋಪಿಗಳಾಗಿದ್ದಾರೆ.

ಆಗಸ್ಟ್ 11ರಂದು ಬೆಳಗ್ಗೆ ಸಾವಕ್ಕ ಪತಿ ನಿಂಗಪ್ಪಗೆ ಉಪಹಾರಕ್ಕಾಗಿ ಉಪ್ಪಿಟ್ಟು ಮಾಡಿದ್ದರು. ಅದನ್ನು ತಿಂದ ಕೆಲವೇ ಗಂಟೆಗಳಲ್ಲಿ ನಿಂಗಪ್ಪ ತೀವ್ರ ಅಸ್ವಸ್ಥರಾಗಿದ್ದರು. ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದು, ವೈದ್ಯರ ಸಲಹೆ ಮೇರೆಗೆ ಹುಬ್ಬಳ್ಳಿಯ ಕಿಮ್ಸ್ ಗೆ  ದಾಖಲಿಸಿದ್ದರು. ಸದ್ಯ ತೀವ್ರ ನಿಗಾ ಘಟಕದಲ್ಲಿ ನಿಂಗಪ್ಪಗೆ ಚಿಕಿತ್ಸೆ ಮುಂದುವರಿದಿದೆ.

ಇದೇ ಉಪ್ಪಿಟ್ಟು ತಿಂದಿದ್ದ ಒಂದು ನಾಯಿ, ಒಂದು ಬೆಕ್ಕು ಸಾವನ್ನಪ್ಪಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಮಾಹಿತಿ ನೀಡಿದರು. ನಿಂಗಪ್ಪ ಅವರ ತಂದೆ ಫಕೀರಪ್ಪ ನೀಡಿದ ದೂರಿನ ಮೇರೆಗೆ ಸವದತ್ತಿ ಪೊಲೀಸರು ತನಿಖೆ ನಡೆಸಿದ್ದಾರೆ