Monday, January 20, 2025
ಸುದ್ದಿ

ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಆರೋಪ: ಪ್ರತ್ಯೇಕ ಪ್ರಕರಣಗಳಡಿ ಆರೋಪಿಗಳಿಬ್ಬರ ಬಂಧನ..!ಕಹಳೆ ನ್ಯೂಸ್

ಡಾರ್ಜಿಲಿಂಗ್: ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಪ್ರದೇಶಗಳಲ್ಲಿ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದೆ ಎನ್ನಲಾದ ಆರೋಪಗಳು ಕೇಳಿ ಬಂದಿವೆ. ಈ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬoಧಿಸಿದoತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಎರಡೂ ಕೇಸ್‌ಗಳಲ್ಲಿ ದಾಖಲಾಗಿದ್ದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳಿಬ್ಬರನ್ನೂ ಬಂಧಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮೊಬೈಲ್ ಫೋನ್‌ನಲ್ಲಿ ಕಾರ್ಟೂನ್ ತೋರಿಸುವುದಾಗಿ ಆಮಿಷವೊಡ್ಡಿ ಮೂರನೇ ತರಗತಿ ಓದುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಎರಡನೇ ಘಟನೆಯಲ್ಲಿ, ಖಾರಿಬರಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ. ಖರಿಬರಿ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಗುರುವಾರ ತಡರಾತ್ರಿ ಖರಿಬರಿ ಬ್ಲಾಕ್‌ನ ಬುರಗಂಜ್ ಪ್ರದೇಶದಿಂದ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಗಿಬ್ರಾನಸ್ ಕುಜೂರ್ (20) ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಂತ್ರಸ್ತರ ಪೋಷಕರಿಬ್ಬರೂ ದಿನಗೂಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿ ಯುವಕ ಮನೆಗೆ ಬಂದು ಬಾಲಕಿಗೆ ಮೊಬೈಲ್‌ನಲ್ಲಿ ಕಾರ್ಟೂನ್ ತೋರಿಸುವುದಾಗಿ ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಈ ವಿಷಯವನ್ನು ಬಹಿರಂಗಪಡಿಸಿದರೆ, ಕುಟುಂಬ ಸದಸ್ಯರನ್ನು ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಮೊದಮೊದಲು ಏನನ್ನೂ ಹೇಳದ ಬಾಲಕಿ, ನಂತರ ಅಸ್ವಸ್ಥಗೊಂಡಾಗ ಅಜ್ಜಿ ಎದುರು ನಡೆದ ಘಟನೆ ಬಗ್ಗೆ ತಿಳಿಸಿದ್ದಾಳೆ.

ಬಳಿಕ ಸಂತ್ರಸ್ತೆಯ ಕುಟುಂಬದವರು ತಡರಾತ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಖರಿಬರಿ ಠಾಣೆಯ ಪೊಲೀಸರು ಪ್ರಾಥಮಿಕ ತನಿಖೆಯ ನಂತರ ಆರೋಪಿಯನ್ನು ಬಂಧಿಸಿದ್ದಾರೆ. ಶುಕ್ರವಾರ ಆರೋಪಿಯನ್ನು ಸಿಲಿಗುರಿ ಉಪ-ವಿಭಾಗೀಯ ನ್ಯಾಯಾಲಯಕ್ಕೆ ಕರೆತಂದಾಗ, ನ್ಯಾಯಾಧೀಶರು ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು. ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಲು ಆದೇಶ ನೀಡಿದರು. “ಘಟನೆಗೆ ಸಂಬoಧಿಸಿದoತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಸತ್ಯವನ್ನು ಹೊರಹಾಕಲು ಎಲ್ಲಾ ರೀತಿಯ ತನಿಖೆಗಳನ್ನು ಮಾಡಲಾಗುತ್ತಿದೆ” ಎಂದು ಡಾರ್ಜಿಲಿಂಗ್‌ನ ಡಿಎಸ್‌ಪಿ (ಗ್ರಾಮೀಣ) ಅಚಿಂತ್ಯ ಗುಪ್ತಾ ತಿಳಿಸಿದ್ದಾರೆ.