Sunday, November 24, 2024
ಸುದ್ದಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ ನೀಡಿದ ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ – ಕಹಳೆ ನ್ಯೂಸ್

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪದ್ಮುಂಜ 2022-23 ಸಾಲಿನಲ್ಲಿ, ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದೆ. ಈ ಹಿನ್ನಲೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ. ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ.ಎಮ್.ಎನ್ ರಾಜೇಂದ್ರ ಕುಮಾರ್‌ರವರು ಪದ್ಮುಂಜ ಸಿಎ ಬ್ಯಾಂಕಿನ ಅಧ್ಯಕ್ಷ ರಕ್ಷಿತ್ ಪಣೆಕ್ಕರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಘುಪತಿ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು,ಪದ್ಮುಂಜ ಸಿಎ ಬ್ಯಾಂಕಿನ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.