Sunday, November 24, 2024
ಸುದ್ದಿ

ಯೋಗಿ ಆದಿತ್ಯನಾಥ್ ಪಾದ ಸ್ಪರ್ಶಿಸಿ ನಮಸ್ಕರಿಸಿದ ಸೂಪರ್ ಸ್ಟಾರ್: ‘ಜೈಲರ್’ ಸ್ಟಾರ್ ರಜನಿಕಾಂತ್ ! – ಕಹಳೆ ನ್ಯೂಸ್

ಜೈಲರ್ ಸ್ಟಾರ್ ರಜನಿಕಾಂತ್ ಅವರು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಶನಿವಾರ ಭೇಟಿಯಾದರು.ಕಾಲಿವುಡ್ ಸೂಪರ್ ಸ್ಟಾರ್ ‘ತಲೈವಾ’ ರಜನಿಕಾಂತ್ ಅವರ ಜೈಲರ್ ಸಿನಿಮಾ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ಸು ಕಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ರಜನಿಕಾಂತ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಲಕ್ನೋದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.ಶುಕ್ರವಾರ ಲಕ್ನೋದಲ್ಲಿ ಜೈಲರ್ ಸ್ಪೆಷಲ್ ಸ್ಕ್ರೀನಿಂಗ್ ಆಯೋಜಿಸಲಾಗಿತ್ತು. ಈವೆಂಟ್‌ನಲ್ಲಿ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯು ಕೂಡಾ ಪಾಲ್ಗೊಂಡಿದ್ದರು. ಇದೀಗ ರಜನಿಕಾಂತ್ ಮತ್ತು ಯೋಗಿ ಆದಿತ್ಯನಾಥ್ ಭೇಟಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ವೈರಲ್ ವಿಡಿಯೋದಲ್ಲಿ, ರಜನಿಕಾಂತ್ ಅವರು ಸಿಎಂ ಯೋಗಿ ಪಾದ ಸ್ಪರ್ಶಿಸುತ್ತಿರುವುದನ್ನು ನೋಡಬಹುದು.

ಕೆಲವೇ ಕ್ಷಣಗಳಲ್ಲಿ ಆನ್‌ಲೈನ್‌ನಲ್ಲಿ ಭಾರಿ ವೀವ್ಸ್ ಪಡೆದಿರುವ ವಿಡಿಯೋದಲ್ಲಿ, ರಜನಿಕಾಂತ್ ಅವರು ಕಾರಿನಿಂದ ಇಳಿಯುವುದನ್ನು ಕಾಣಬಹುದು. ಜನರಿಗೆ, ಅಭಿಮಾನಿಗಳಿಗೆ ನಮಸ್ಕರಿಸುತ್ತಾ ಅವರು ಮುಂದೆ ಸಾಗುತ್ತಾರೆ. ಸೂಪರ್ ಸ್ಟಾರ್ ಸ್ವಾಗತಿಸಲು ಸಿಎಂ ಯೋಗಿ ಹೊರಗೆ ಆಗಮಿಸಿದ್ದರು. ಈ ವೇಳೆ ರಜನಿಕಾಂತ್ ಸಿಎಂ ಯೋಗಿ ಅವರ ಪಾದ ಮುಟ್ಟಿ ಆಶೀರ್ವಾದ ಪಡೆದರು. ಸೂಪರ್ ಸ್ಟಾರ್ ಸರಳತೆ ಜನರ ಹೃದಯ ಗೆದ್ದಿದೆ. ವಿಡಿಯೋಗೆ ನೆಟ್ಟಿಗರು ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

 

ಆರೋಪಿ ನಾಗರಾಜಪ್ಪ ಪ್ರತಿ ನಿತ್ಯ ಮದ್ಯಪಾನ ಮಾಡಿ ಮನೆಗೆ ಬಂದು ತನ್ನ ಪತ್ನಿ ಸುಲೋಚನಾ ಜೊತೆ ಜಗಳವಾಡುತ್ತಿದ್ದನು. ಕಳೆದ ಶುಕ್ರವಾರವೂ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಸುಲೋಚನಾಗೆ ಮನಬಂದoತೆ ಥಳಿಸಿದ್ದು, ಸುಲೋಚನಾ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ. ಬಳಿಕ ದಿಕ್ಕು ತೋಚದೆ ಸಂತೇಬೆನ್ನೂರು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಪತ್ನಿಯನ್ನು ಕೊಲೆ ಮಾಡಿರುವುದಾಗಿ ಪೊಲೀಸರ ಎದುರು ಒಪ್ಪಿಕೊಂಡಿದ್ದಾನೆ. ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಸಂತೇಬೆನ್ನೂರು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಳಿಕ ಸುಲೋಚನಾಳ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ಪತ್ನಿಯನ್ನು ಹತ್ಯೆಗೈದು ಠಾಣೆಗೆ ಶರಣಾಗಿದ್ದ ಪತಿ: ಇತ್ತೀಚೆಗೆ ಪತಿಯೋರ್ವ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದು ಬೆಂಗಳೂರು ನಗರದ ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ಶರಣಾಗಿದ್ದ ಘಟನೆ ನಡೆದಿತ್ತು. ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿಯಲ್ಲಿ ಘಟನೆ ನಡೆದಿತ್ತು. ಸರಿತಾ(೩೫) ಮೃತ ದುರ್ದೈವಿ. ತಾರಾನಾಥ್ ಕೊಲೆಗೈದ ಆರೋಪಿ. ಪತ್ನಿ ಸರಿತಾಳ ಕುತ್ತಿಗೆಗೆ ಹಗ್ಗದಿಂದ ಬಿಗಿದು ಪತಿ ಹತ್ಯೆಗೈದಿದ್ದ.

ಮೂಲತಃ ಮಂಗಳೂರಿನವರಾದ ದಂಪತಿ ಬೆಂಗಳೂರಿನಲ್ಲಿ ಪಾನೀಪುರಿ ಅಂಗಡಿ ನಡೆಸುತ್ತಿದ್ದರು. ಆಗಸ್ಟ್ ೬ರಂದು ಆರೋಪಿ ತಾರಾನಾಥ್ ಪತ್ನಿಯನ್ನು ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ. ಆದರೆ ಧೈರ್ಯ ಸಾಲದೇ ಪೊಲೀಸರಿಗೆ ಶರಣಾಗಿದ್ದ.ಮೃತ ಸರಿತಾ ವಿರುದ್ಧ ಈ ಹಿಂದೆ ಮಂಗಳೂರಿನ ಮೂಲ್ಕಿ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆ “ಪರಿಚಿತರು ಆಕೆಯನ್ನು ಕಳ್ಳಿ ಕಳ್ಳಿ ಎನ್ನುತ್ತಿದ್ದರು. ಸಹಿಸಲಾರದೇ ಆರೋಪಿ ತಾರಾನಾಥ್ ಸರಿತಾಳನ್ನು ಹತ್ಯೆಗೈದಿರುವುದಾಗಿ ಆರೋಪಿ ಪೊಲೀಸರ ಮುಂದೆ ಹೇಳಿಕೊಂಡಿದ್ದಾನೆ.
ಈ ಬಗ್ಗೆ ಮಾಹಿತಿ ನೀಡಿದ್ದ ವೈಟ್ ಫೀಲ್ಡ್ ವಿಭಾಗ ಡಿಸಿಪಿ ಎಸ್.ಗಿರೀಶ್, ಮಂಗಳೂರು ಮೂಲದ ತಾರಾನಾಥ್ ಎಂಬವರು ಇಲ್ಲಿನ ವೈಟ್ ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಪಾನಿಪುರಿ ಅಂಗಡಿ ಇಟ್ಟುಕೊಂಡಿದ್ದರು. ಕಳೆದ ೧೧ ವರ್ಷಗಳ ಹಿಂದೆ ತಾರಾನಾಥ್ ಅವರಿಗೆ ಮದುವೆಯಾಗಿತ್ತು. ತಾರಾನಾಥ್ ಏಕಾಏಕಿ ತನ್ನ ಹೆಂಡತಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಆತನೇ ಬಂದು ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ ಎಂದು ತಿಳಿಸಿದ್ದರು.