Recent Posts

Monday, November 25, 2024
ಸುದ್ದಿ

ಮತ್ತೊಂದು ಭಯಾನಕ ಭವಿಷ್ಯ ಶ್ರಾವಣ ಮಾಸದ ಮಧ್ಯಂತರದಲ್ಲಿ. ನುಡಿದ ಕೋಡಿಮಠದ ಶ್ರೀಗಳು!-ಕಹಳೆ ನ್ಯೂಸ್

ಬೆಳಗಾವಿ: ತಮ್ಮ ಭವಿಷ್ಯವಾಣಿಯಿಂದಲೇ ಹೆಚ್ಚು ಸುದ್ದಿಯಲ್ಲಿರುವ ಹಾಸನದ ಕೋಡಿ ಮಠದ ಡಾ.ಶಿವಾನಂದ ಶಿವಯೋಗಿ ಮಹಾ ಸ್ವಾಮೀಜಿಗಳು ಮತ್ತೊಂದು ಭಯಾನಕ ಭವಿಷ್ಯವನ್ನು ನುಡಿದಿದ್ದು, ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿ ಇದೆ ಎಂದು ಹೇಳಿದ್ದಾರೆ.ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿ ಶ್ರೀಗಳು ಭೂಕಂಪನಗಳು, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ನೋವು ಸಂಭವಿಸುತ್ತದೆ. ವಿಷಾನಿಲ ಬೀಸುವ ಪ್ರಸಂಗವೂ ಇದೆ ಮತ್ತು ಅದು ಎಲ್ಲ ಕಡೆಯೂ ವ್ಯಾಪಿಸಲಿದೆ. ವಿಪರೀತ ಮಳೆಯಿಂದ ಎರಡು ದೇಶಗಳು ನಾಶ ಆಗುತ್ತದೆ. ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ ಎಂದು ಭವಿಷ್ಯ ನುಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ದಕ್ಷಿಣ ಭಾರತದಲ್ಲಿ ಸಮೃದ್ಧಿಯಾಗುವ ಲಕ್ಷಣಗಳಿವೆ. ಇಲ್ಲಿ ಯಾವುದೇ ತೊಂದರೆಯಿಲ್ಲ. ಭೂಕಂಪನದಿAದ ದೊಡ್ಡ ದೊಡ್ಡ ನಗರಗಳಿಗೆ ಅಪಾಯವಾಗಲಿದೆ. ಇದ್ದಕ್ಕಿದ್ದಂತೆ ಜನರ ಸಾವಾಗುವ ಆತಂಕವಿದೆ. ಜಾಗತಿಕ ಮಟ್ಟದಲ್ಲಿ ವಿಷಾನಿಲದ ಪರಿಣಾಮ ಭಾರತದ ಮೇಲೂ ಆಗಲಿದೆ. ಜಗತ್ತಿನ ಸಾಮ್ರಾಟಗಳು ತಲ್ಲಣಗೊಳ್ಳುವ ಪ್ರಸಂಗವೂ ಇದೆ. ಅದರ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು ಎಂದು ಸ್ವಾಮೀಜಿ ಹೇಳಿದರು.
ಚಂದ್ರಯಾನ-೩ ಯಶಸ್ವಿಯಾಗಿ ಒಳ್ಳೆಯದಾಗಲಿದೆ. ಲೋಕಸಭೆ ಚುನಾವಣೆ ಫಲಿತಾಂಶ ಬಗ್ಗೆ ಹೇಳಲು ಇನ್ನೂ ಸಮಯವಿದೆ. ನೋಡಿ ಹೇಳುತ್ತೇವೆ. ದೈವದ ಬಲ ಮನುಷ್ಯನಿಗೆ ಮುಖ್ಯವಾಗಿ ಬೇಕು. ಯಾರು ದೈವ ನಂಬುತ್ತಾನೇಯೋ ಅಂಥವರಿಗೆ ತೊಂದರೆಯಿಲ್ಲ. ಇಲ್ಲವಾದರೆ ಆಪತ್ತು ಮತ್ತು ಸಾವುಗಳು ಸಂಭವಿಸುತ್ತವೆ. ಕೆಲವರಿಗೆ ದೈವಬಲ ಇದ್ದರೂ ತೊಂದರೆ ಆಗುತ್ತದೆ. ಅದು ಪ್ರಕೃತಿಯ ನಿಯಮ ಎಂದು ಹೇಳಿದರು.
ಪ್ರಾಕೃತಿಕ ದೋಷದಿಂದಲೇ ಸಾವು-ನೋವು ಹೆಚ್ಚುತ್ತಿವೆ. ಆಹಾರ ಪದ್ಧತಿಯಲ್ಲಿ ಬದಲಾವಣೆ ಆಗುತ್ತಿದೆ. ಕೆಮಿಕಲ್ ಮಿಶ್ರಿತ ಆಹಾರ ಸೇವನೆ ಹೆಚ್ಚುತ್ತಿದೆ. ಸೀಮೆ ಗೊಬ್ಬರ, ದನದ ಗೊಬ್ಬರ ಹಾಕಿ ಬೆಳೆ ಮೊದಲು ಬೆಳೆಯಲಾಗುತ್ತಿತ್ತು. ಈಗ ಕೆಮಿಕಲ್ ಸಿಂಪಡಣೆ ಹೆಚ್ಚುತ್ತಿದೆ. ಹಣ್ಣಿಗೂ ಕೆಮಿಕಲ್ ಹಾಕಲಾಗುತ್ತಿದೆ. ವಿಷವನ್ನೇ ಬಿತ್ತಿ, ವಿಷವನ್ನೇ ಬೆಳೆದು, ವಿಷವನ್ನೇ ಉಣ್ಣುವಾಗ ಆರೋಗ್ಯ ವೃದ್ಧಿ ಹೇಗೆ ಸಾಧ್ಯ? ಎಂದು ಪ್ರಶ್ನೆ ಮಾಡಿದರು.

ಮನುಷ್ಯ ಭಗವಂತನನ್ನು ಮರೆತಿದ್ದಾನೆ
ಪ್ರಕೃತಿ ಕೂಡ ಮುನಿಸಿಕೊಳ್ಳುವ ಸ್ಥಿತಿ ಇದೆ. ಗಿಡಮರಗಳನ್ನು ಮನುಷ್ಯ ನಾಶ ಮಾಡುತ್ತಿದ್ದಾನೆ. ಈ ಪ್ರಕೃತಿಯ ದೋಷ ಮನುಕುಲಕ್ಕೆ ಇದೆ. ಮೊದಲು ಅಂತರ್ಜಲ ಹೆಚ್ಚಿತ್ತು. ಈಗ ಆಳವಾಗಿ ಬೋರವೆಲ್ ಕೊರೆಸಬೇಕು. ಹೀಗಾಗಿ ಪ್ರಳಯ ಜಾಸ್ತಿ ಆಗ್ತಿವೆ. ಮನುಷ್ಯ ಅತಿವೇಗದಲ್ಲಿ ಹಣ ಮಾಡಲು ಹೊರಟಿದ್ದಾನೆ. ಹೀಗಾಗಿ ಆಪತ್ತು ಹೆಚ್ಚಿವೆ. ಇದೆಲ್ಲದರ ನಿಯಂತ್ರಣಕ್ಕೆ ಭಗವಂತನಿದ್ದಾನೆ. ಆದರೆ, ಮನುಷ್ಯ ಭಗವಂತನನ್ನು ಮರೆತಿದ್ದಾನೆ. ದೈವ ನಂಬಿಕೆ ಮೇಲೆ ಜೀವನ ಮಾಡಬೇಕು. ಇವುಗಳನ್ನು ಕಳೆದುಕೊಂಡ ಪರಿಣಾಮವೇ ಅನಾಹುತ ಆಗ್ತಿವೆ ಎಂದರು.