ಜಿಲ್ಲಾ ಲಯನ್ಸ್ 317C ಇದರ ಸಂಪುಟ ಮತ್ತು ಗವರ್ನರ್ ಪದ ಪ್ರಧಾನ ಸಮಾರಂಭವು ಉಡುಪಿಯ ಅಂಬಾಗಿಲಿನ ಅಮೃತ್ ಗಾರ್ಡನ್ನಲ್ಲಿ ನಡೆಯಿತು. ಉಡುಪಿ ಬಿಷಪ್ ಡಾ ಜೆರಾಲ್ಡ್ ಐಸಾಕ್ ಲೋಬೊ ಭಾಗವಹಿಸಿ ಆಶೀರ್ವಚನ ನೀಡಿದರು.
ಜಿಲ್ಲಾ ಲಯನ್ಸ್ 317C ಯ ಗವರ್ನರ್ ಡಾ. ನೇರಿ ಕರ್ನೇಲಿಯೊ, ಲಯನ್ಸ್ ಕ್ಲಬ್ನ ಪ್ರಮುಖರಾದ ರಾಮಕೃಷ್ಣ ಮೂರ್ತಿ, ಕೆ. ವಂಶಿಧರ್ ಬಾಬು, ಜಿ. ಶ್ರೀನಿವಾಸ್,ಜಿಲ್ಲಾ ಲಯನ್ಸ್ ಸಂಪುಟ ಕಾರ್ಯದರ್ಶಿ ರವಿರಾಜ ನಾಯಕ್, ಖಜಾಂಚಿ ರೀಚರ್ಡ್ ಡಯಸ್, ಮಾರ್ಕೇಟಿಂಗ್ ಸಂವಹನ-ಮಾಹಿತಿ ಅಧಿಕಾರಿಗಳಾದ ಸಿದ್ಧರಾಜು, ಡಾ ಜಗದೀಶ್ ಹೊಳ್ಳ, ಜಾರ್ಜ್ ಡಿ’ಸೋಜಾ ಮೊದಲಾದ ಗಣ್ಯರು ಭಾಗವಹಿಸಿದ್ದರು.