Friday, January 24, 2025
ಸುದ್ದಿ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತಿನೆ : ಮದ್ರಸ ಶಿಕ್ಷಕನಿಗೆ ಶಿಕ್ಷೆ ವಿಧಿಸಿದ ಬೆಳ್ತಂಗಡಿ ನ್ಯಾಯಾಲಯ – ಕಹಳೆ ನ್ಯೂಸ್

ಬೆಳ್ತಂಗಡಿ : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಮಾನಭಂಗಕ್ಕೆ ಯತ್ನಿಸಿದ ಆರೋಪ ಎದುರಿಸುತ್ತಿದ್ದ ಮದ್ರಸ ಶಿಕ್ಷಕನಿಗೆ ಬೆಳ್ತಂಗಡಿ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶಿದೆ.


ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಧರ್ಮಸ್ಥಳ-ಪುತ್ತೂರು ಕೆಎಸ್‌ಆರ್‌ಟಿಸಿ ಬಸ್, ಉಪ್ಪಿನಂಗಡಿ ಸಮೀಪದ ಇಳಂತಿಲ ಕಡವಿನಬಾಗಿಲು ಎಂಬಲ್ಲಿ ಹೋಗುತ್ತಿದ್ದ ವೇಳೆ ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ, ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಂದಿಗೆ, ಮೂಡಿಗೆರೆ ತಾಲೂಕಿನ ಬಣ್ಣ್ಕಲ್ಲ್ ಮೂಲದ ಮದ್ರಸ ಶಾಲೆಯ ಶಿಕ್ಷಕ ಮುಹಮ್ಮದ್ ಸೈಫುಲ್ಲಾ ಎಂಬಾತನ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿ ಆಕೆಯ ಮಾನಭಂಗಕ್ಕೆ ಯತ್ನಿಸಿದ ಆರೋಪ ಕೇಳಿ ಬಂದಿತ್ತು.

ಮದ್ರಸ ಶಾಲೆಯ ಶಿಕ್ಷಕ ಮುಹಮ್ಮದ್ ಸೈಫುಲ್ಲಾ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಪೂರ್ಣಗೊಳಿಸಿದ ಬಳಿಕ ಆರೋಪಿ ವಿರುದ್ಧ ಪೊಲೀಸರು ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶ ದೇವರಾಜ ಹೆಚ್.ಎಂ. ಅವರು ಆರೋಪಿ ಮುಹಮ್ಮದ್ ಸೈಫುಲ್ಲಾ ಅಪರಾಧಿ ಎಂದು ಘೋಷಿಸಿದ್ದು, ಆತನಿಗೆ 6 ತಿಂಗಳು ಜೈಲು ಶಿಕ್ಷೆ ಮತ್ತು 5 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

ಪ್ರಾಸಿಕ್ಯೂಶನ್ ಪರವಾಗಿ ಬೆಳ್ತಂಗಡಿ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕರಾಗಿರುವ ಪುತ್ತೂರು ಬೊಳುವಾರು ನಿವಾಸಿ ದಿವ್ಯರಾಜ್ ಹೆಗ್ಡೆ ವಾದಿಸಿದ್ದರು.