Saturday, November 23, 2024
ಸುದ್ದಿ

ಕಡಿಮೆ ಗೌರವಧನ, ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು: ಚುನಾವಣಾ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು ದುಡಿಸುವ ಇಲಾಖೆ ಕಡಿಮೆ ಗೌರವಧನ ವಿತರಿಸುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತರ ಮತ್ತು ಸಹಾಯಕಿಯರ ಸಂಘದಿಂದ ಪ್ರತಿಭಟನೆ ನಡೆಯಿತು.

ದ. ಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಬೂತ್ ಮಟ್ಟದ ಅಧಿಕಾರಿಗಳಾದ ಅಂಗನವಾಡಿ ಕಾರ್ಯಕರ್ತೆಯರ ಪ್ರೋತ್ಸಾಹ ಧನ ಹೆಚ್ಚಿಸಬೇಕೆಂದು ಆಗ್ರಹಿಸಿದರು. ಚುನಾವಣಾ ಆಯೋಗವು ತಿಂಗಳಿಗೆ ವರ್ಷಕ್ಕೆ500 ರೂವಿನಂತೆ 6 ಸಾವಿರ ಮಾತ್ರ ನೀಡುತ್ತಿದೆ. ಇದು ತೀರಾ ಕಡಿಮೆ . ಇಲಾಖೆ ಪ್ರೋತ್ಸಾಹಧನ ಹೆಚ್ಚಿಸಬೇಕೆಂದು ಆಗ್ರಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

200ರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ಸರಕಾರದ ವಿರುದ್ಧ ಜನಪ್ರತಿನಿಧಿಗಳ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು