Thursday, January 23, 2025
ಸುದ್ದಿ

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ-ಕಹಳೆ ನ್ಯೂಸ್

ಪುತ್ತೂರು: ಆದಿ ಸುಬ್ರಹ್ಮಣ್ಯದಲ್ಲಿ ಹುತ್ತಕ್ಕೆ ಪೂಜೆ ಸಲ್ಲುವಂತೆ ಪುತ್ತೂರು ತಾಲೂಕಿನಲ್ಲೂ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿಯ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು


ದೇವಸ್ಥಾನದ ನಾಗನಕಟ್ಟೆಯಲ್ಲಿ ಬೆಳಿಗ್ಗೆ ನಾಗದೇವರಿಗೆ ಹಾಲಿನ ಅಭಿಷೇಕ, ಸಿಯಾಳ ಅಭಿಷೇಕ ನಾಗತಂಬಿಲ ನಡೆಯಿತು.
ಬಳಿಕ ವಲ್ಮಿಕ ರೂಪಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಪೂಜೆ ನಡೆದ ಬಳಿಕ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ಮೊದಲಾದವರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು