Monday, November 25, 2024
ಸುದ್ದಿ

ದ.ಕ. ಜಿಲ್ಲೆಯ ಡಿಸಿ ಮನ್ನಾ ಜಮೀನುಗಳ ಪಟ್ಟಿಯನ್ನು ಒದಗಿಸುವಂತೆ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನಿರ್ದೇಶನ – ಕಹಳೆ ನ್ಯೂಸ್

ಬಂಟ್ವಾಳ : ಬೆಳ್ತಂಗಡಿ, ಮೂಡುಬಿದಿರೆ ಹಾಗೂ ಮಂಗಳೂರು ತಾಲೂಕಿನಲ್ಲಿ ನಿವೇಶನ ಹಾಗೂ ಕೃಷಿಗಾಗಿ ಅರ್ಹರಿಗೆ ಡಿಸಿ ಮನ್ನಾ ಜಮೀನು ಎಂದು ಘೋಷಿಸಲಾಗಿರುವ ಸ್ಥಳಗಳ ಪಟ್ಟಿಯನ್ನು ಒದಗಿಸುವಂತೆ ಆಯಾ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಡಿಸಿ ಮನ್ನಾ ಜಮೀನಿಗೆ ಸಂಬಂಧಿಸಿ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಡಿಸಿ ಮನ್ನಾ ಜಮೀನುಗಳು ಯಾವುದು, ಎಷ್ಟಿದೆ ಎಂಬ ಮಾಹಿತಿಯಲ್ಲಿ ವ್ಯತ್ಯಾಸ ಕಂಡುಬಂದಿರುವುದರಿಂದ ಹಾಗೂ ಸಭೆಯಲ್ಲಿ ಸಮುದಾಯದ ಮುಖಂಡರು ಡಿಸಿ ಮನ್ನಾ ಜಮೀನು ಇನ್ನೂ ಹೆಚ್ಚು ಇದೆ ಎಂಬ ಅಂಶಗಳನ್ನು ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಒಟ್ಟಾರೆಯಾಗಿ “ಅಡಂಗಲ್’ ಒಳಗೊಂಡಂತೆ ಎಲ್ಲ ದಾಖಲೆ ಪರಿಶೀಲಿಸಿ, ಡಿಸಿ ಮನ್ನಾ ಜಮೀನು ಎಷ್ಟಿದೆ ಎಂಬುದನ್ನು ಒಂದರಿಂದ ಒಂದೂವರೆ ತಿಂಗಳಲ್ಲಿ ಪರಿಶೀಲಿಸಿ ವರದಿ ನೀಡುವಂತೆ ತಹಶೀಲ್ದಾರರಿಗೆ ಸೂಚಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ವರದಿ ಬಂದ ಅನಂತರ ಅದನ್ನು ಪ್ರಕಟಿಸಿ, ಸಾರ್ವಜನಿಕರಿಂದಲೂ ಆಕ್ಷೇಪಣೆ ಆಹ್ವಾನಿಸಲಾಗುವುದು ಎಂದು ಡಿಸಿ ತಿಳಿದರು.
ಡಿಸಿ ಮನ್ನಾ ಜಮೀನನ್ನು ಯಾವ ರೀತಿ ವಿತರಣೆ ಮಾಡಬೇಕೆಂದು ಸರಕಾರಕ್ಕೆ ಈಗಾಗಲೇ ಸಲ್ಲಿಸಲಾಗಿರುವ ಕರಡು ಪ್ರತಿ ಹಾಗೂ ಅದರಿಂದ ಪ್ರಾಕ್ಟಿಕಲ್ ಆಗಿ ಎದುರಾಗಬಹುದಾದ ಸಮಸ್ಯೆಗಳು ಯಾವುವು ಎಂಬುದನ್ನು ಪರಿಶೀಲಿಸಲಾ ಗುವುದು. ನಂತರದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ನೀಡದಂತೆ ಡಿಸಿ ಮನ್ನಾ ಜಮೀನನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲೆಯ ಸಹಾಯಕ ಆಯುಕ್ತರು ಹಾಗೂ ತಹಶೀಲ್ದಾರರು 94-ಸಿ, 94-ಸಿಸಿಯಡಿ ಬರುವ ಅರ್ಜಿಗಳನ್ನು ಪರಿಶೀಲಿಸುವ ಸಂದರ್ಭ ಡಿಸಿ ಮನ್ನಾ ಜಮೀನಿಗೆ ಸಂಬಂಧಪಡುವ ಪ್ರಕರಣವೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದರು.