Monday, January 20, 2025
ಸುದ್ದಿ

ಪಂದಳ ರಾಜ ಮನೆತನದ ಪ್ರಕಟಣೆ, ಸಾಮಾಜಿಕ ಜಾಲತಾಣದಲ್ಲಿ ವೈರಲ್ – ಕಹಳೆ ನ್ಯೂಸ್

ಮಂಗಳೂರು: ಪಂದಳ ರಾಜ ಮನೆತನದ ಪ್ರಕಟಣೆ ಈ ನಡುವೆ ಪಂದಳ ರಾಜ ಮನೆತನ ಪ್ರಕಟಣೆ ಹೊರಡಿಸಿದೆ. ಈ ಕುರಿತ ಪ್ರಕಟಣಾ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಬರಿ ಮಲೆ ದೇವಸ್ಥಾನದ ಹದಿನೆಂಟು ಮೆಟ್ಟಿಲುಗಳನ್ನು ದಾಟಿ ಒಬ್ಬಳೇ ಒಬ್ಬ ಯುವತಿ ಒಳ ನಡೆದರೂ ಪಂದಳ ರಾಜರ ಅರಮನೆಯಲ್ಲಿರುವ ಆಭರಣದ ಪೆಟ್ಟಿಗೆ ಮುಂದೆಂದೂ ಶಬರಿ ಮಲೆಯ ಸನ್ನಿಧಾನಕ್ಕೆ ಬರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಷ್ಟೇ ಅಲ್ಲ, ಪ್ರಕಣೆಯಲ್ಲಿ ದೇವಸ್ಥಾನವು ಸರಕಾರದ ಸೊತ್ತಾಗಿರಬಹುದು. ಆದರೆ ಅಯ್ಯಪ್ಪನಿಗೆ ಸಂಬಂಧಪಟ್ಟ ಆಭರಣಗಳು ನಮ್ಮ ಕುಟುಂಬದ ಸ್ವತ್ತಾಗಿರುತ್ತದೆ. ಅದನ್ನು ಬಲವಂತವಾಗಿ ಯಾರೂ ತರಿಸಿಕೊಳ್ಳಲಾಗುವುದಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೆಂಗಸರು ಪ್ರವೇಶಿಸುವ ಶಬರಿಮಲೆಗೆ ಇನ್ನು ಮುಂದೆ ಪಂದಳ ರಾಜಮನೆತನದವರು ಕಾಲಿಡುವುದಿಲ್ಲ ಎಂಬ ಪ್ರಕಟಣೆಯ ಮೂಲಕ ಕರಾರಾಗಿ ಪ್ರಕಟಿಸುತ್ತೇವೆ ಎಂದು ಸರ್ಕಾರಕ್ಕೂ ದೇವಸ್ಥಾನದ ಆಡಳಿತ ಮಂಡಳಿಗೂ ಸುತ್ತೋಲೆಯನ್ನು ಕಳಿಸಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಈ ಪ್ರಕಟಣೆಯ ಬಗ್ಗೆ ಕೇರಳ ಸರಕಾರ ಈವರೆಗೆ ಸ್ಪಷ್ಟಪಡಿಸಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಪ್ರಕಟಣಾ ಪತ್ರದ ಬಗ್ಗೆ ಪಂದಳ ರಾಜ ಮನೆತನ ಸ್ಪಷ್ಟ ಪಡಿಸಬೇಕಿದೆ.