Friday, January 24, 2025
ಸುದ್ದಿ

ತಮಿಳುನಾಡಿಗೆ ಕದ್ದುಮುಚ್ಚಿ ನೀರು ಬಿಡುವುದನ್ನು ತಕ್ಷಣ ನಿಲ್ಲಿಸಬೇಕು – ರಾಜ್ಯ ಸರಕಾರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯ –ಕಹಳೆ ನ್ಯೂಸ್

ಉಡುಪಿ : ತಮಿಳುನಾಡಿಗೆ ಕದ್ದುಮುಚ್ಚಿ ನೀರು ಬಿಡುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ರಾಜ್ಯ ಸರಕಾರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ. ಕಾವೇರಿ ನಮ್ಮ ಜೀವನದಿ, ಬಹುತೇಕ ಭಾಗಗಳಿಗೆ ಕುಡಿಯುವ ನೀರನ್ನು ಕಾವೇರಿ ನದಿ ಒದಗಿಸುತ್ತಿದೆ.

ಈ ಬಾರಿ ಮಳೆಯ ಪ್ರಮಾಣ ಕೂಡ ಕಡಿಮೆಯಾಗಿದೆ. ಜನರು ಕುಡಿಯುವ ನೀರಿಗೆ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ತಮಿಳುನಾಡು ಕೃಷಿಕರಿಗೆ ಹೆಚ್ಚುವರಿ ಬೇಸಾಯಕ್ಕಾಗಿ ನೀರು ಬಿಡುವುದು ಸರಿಯಲ್ಲ. ಮೊದಲ ಅದ್ಯತೆ ಕುಡಿಯುವ ನೀರು, ಆಮೇಲೆ ಬೇಸಾಯ. ರಾಜ್ಯ ಸರ್ಕಾರ ತಮಿಳುನಾಡು ಸರಕಾರಕ್ಕೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕು. ಅವರಿಗೆ ನೀರು ಬಿಡುವ ಮೂಲಕ ನಮ್ಮ ಕೃಷಿಕರಿಗೆ ಮೋಸ ಮಾಡಬಾರದು ಎಂದು ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ರಾಜ್ಯ ಸರಕಾರವನ್ನ ಒತ್ತಾಯಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು