ಬೀದರ್ : ಅಕ್ರಮವಾಗಿ ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಸಾಗಾಟ ಮಾಡುತ್ತಿದ್ದ ಕೋಟ್ಯಂತರ ರೂ. ಮೌಲ್ಯದ ಗಾಂಜಾವನ್ನು ಸೀನಿಮಿಯ ಶೈಲಿಯಲ್ಲಿ ಚೇಸ್ ಮಾಡಿ, 1 ಕೋಟಿ ರೂ. ಮೌಲ್ಯದ ಗಾಂಜಾವನ್ನು ಬೀದರ್ ಪೊಲೀಸರು ಜಪ್ತಿ ಮಾಡಿದ್ದಾರೆ.
ಪೊಲೀಸರನ್ನು ನೋಡುತ್ತಿದ್ದಂತೆ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳು ಓಡಿ ಹೋಗಲು ಯತ್ನಿಸಿದ್ದಾರೆ. ಇದನ್ನ ಗಮನಿಸಿದ ಪೊಲೀಸರು ಸೀನಿಮಿಯ ಶೈಲಿಯಲ್ಲಿ ಆರೋಪಿಗಳನ್ನು ಬೆನ್ನಟ್ಟಿದ್ದಾರೆ. ಆದರೆ ಆರೋಪಿಗಳು ಕಾರು ಬಿಟ್ಟು ಪರಾರಿಯಾಗಿದ್ದು, 1 ಕೋಟಿ ರೂ. ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿದ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.