Thursday, January 23, 2025
ಮೂಡಬಿದಿರೆಸುದ್ದಿ

ಮೂಡುಬಿದಿರೆ: ತ್ಯಾಜ್ಯ ನಿರ್ವಹಣೆ ಬಗ್ಗೆ ನಿರ್ಲಕ್ಷ್ಯ : ಪುರಸಭೆ ಸದಸ್ಯರಿಂದ ಜಿಲ್ಲಾಧಿಕಾರಿಗೆ ಮನವಿ – ಕಹಳೆ ನ್ಯೂಸ್

ಮೂಡುಬಿದಿರೆ: ಕರಿಂಜೆ ಮಾರಿಂಜಗುಡ್ಡೆಯಲ್ಲಿರುವ ಘನತ್ಯಾಜ್ಯ ಘಟಕದ ಅಸಮರ್ಪಕ ನಿರ್ವಹಣೆಯಿಂದ ಸಾರ್ವಜನಿಕರಿಗಾಗುತ್ತಿರುವ ತೊಂದರೆ ಬಗ್ಗೆ ಪುರಸಭೆ ಸದಸ್ಯರು ಮತ್ತು ಸಾರ್ವಜನಿಕರು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ತಾಲೂಕು ಆಡಳಿತ ಸೌಧದಲ್ಲಿ ನಡೆದ ಸಾರ್ವಜನಿಕ ಅಹವಾಲು ಸಭೆಯಲ್ಲಿ ದೂರು ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪುರಸಭೆ ತ್ಯಾಜ್ಯ ನಿರ್ವಹಣೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರಿಂದ ಸಮಸ್ಯೆ ಬಿಗಡಾಯಿಸಿದೆ. ಪರಿಸರ ಇಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸುವ ಆಸಕ್ತಿ ತೋರುತ್ತಿಲ್ಲ. ಅವರು ಕಚೇರಿಯಲ್ಲೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂದು ಪುರಸಭೆ ಸದಸ್ಯ ಸುರೇಶ್ ಪ್ರಭು, ಪುರಂದರ ದೇವಾಡಿಗ, ಸುರೇಶ್ ಕೋಟ್ಯಾನ್, ಪಿ.ಕೆ ಥೋಮಸ್, ಕೊರಗಪ್ಪ ಜಿಲ್ಲಾಧಿಕಾರಿಗೆ ದೂರು ನೀಡಿದರು. ನಂತರ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಯೋಜನಾ ನಿರ್ದೇಶಕ ಅಭಿಷೇಕ್ ಅವರು ತ್ಯಾಜ್ಯ ನಿರ್ವಹಣಾ ಘಟಕಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ರೈತರ ಹಾಗೂ ಪಂಚಾಯಿತಿ ಗಮನಕ್ಕೆ ತಾರದೆ ಯುಪಿಟಿಸಿಎಲ್‌ನವರು ಬಲವಂತದ ಕಾಮಗಾರಿ ಆರಂಭಿಸಿದ್ದು, ಮನೆ ಹಾಗೂ ಕೃಷಿ ಭೂಮಿಗೆ ಹಾನಿ ಉಂಟಾಗುತ್ತಿದ್ದು ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ ಎಂದು ಪುತ್ತಿಗೆ , ಪಾಲಡ್ಕ, ಕಡಂದಲೆ, ಮಿತ್ತೂರು ಹಾಗೂ ಕುಪ್ಪೆಪದವು ರೈತರು ಮತ್ತು ಜನಪ್ರತಿನಿಧಿಗಳು ಜಿಲ್ಲಾಧಿಕಾರಿ ಗಮನಕ್ಕೆ ತಂದರು. ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಕೆಪಿಟಿಸಿಎಲ್ ನಿಯಮಾನಮುಸಾರ ಕಾಮಗಾರಿ ನಡೆಸುತ್ತಿದೆ, ಸಂತ್ರಸ್ಥರಿಗೆ ಸಿಗಬೇಕಾದ ಪರಿಹಾರದಲ್ಲಿ ಅನ್ಯಾಯವಾದಲ್ಲಿ ಪರಿಶೀಲಿಸುತ್ತೇನೆ ಎಂದರು.

ಮೂಡುಬಿದಿರೆಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಬೇಕು ಹಾಗೂ ಮಂಗಳೂರು-ಮೂಡುಬಿದಿರೆ-ಕಾರ್ಕಳ ಮಧ್ಯೆ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಭಾರತೀಯ ರೈತ ಸೇನೆ ಮನವಿ ಸಲ್ಲಿಸಿತು. ಇಂದಿರಾ ಕ್ಯಾಂಟೀನ್ ತೆರೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಹಶಿಲ್ದಾರ್‌ಗೆ ಸೂಚಿಸಿದರು. ಸಹಾಯಕ ಕಮಿಷನರ್ ಹರ್ಷವರ್ಧನ್, ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್, ಪುರಸಭೆ ಮುಖ್ಯಾಧಿಕಾರಿ ಶಿವ ನಾಯ್ಕ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. ವಿವಿಧ ಇಲಾಖೆಗಳಿಗೆ ಸಂಬAಧಿಸಿದ 34 ಅರ್ಜಿಗಳು ಸಲ್ಲಿಕೆಯಾದವು.
ಮಾರಿಂಜಗುಡ್ಡೆಯ ಘನತ್ಯಾಜ್ಯ ನಿರ್ವಹಣೆ ಘಟಕದ ಸಮಸ್ಯೆ ಕುರಿತು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವುದಾಗಿ ಸಭೆಯಲ್ಲಿ ಪುರಸಭೆ ಸದಸ್ಯರು ಮತ್ತು ಗ್ರಾಮಸ್ಥರಿಗೆ ಜಿಲ್ಲಾಧಿಕಾರಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು, ಸ್ಥಳೀಯರು ಮತ್ತು ಪತ್ರಕರ್ತರು ಸ್ಥಳಕ್ಕೆ ತೆರಳಿ ಸುಮಾರು ಎರಡು ತಾಸು ಕಾದು ಕುಳಿತರೂ ಜಿಲ್ಲಾಧಿಕಾರಿ ಭೇಟಿ ನೀಡದೆ ತೆರಳಿದ್ದು ಜನಪ್ರತಿನಿಧಿಗಳು ಹಾಗೂ ಸ್ಥಳೀಯರು ಅಸಮಧಾನಗೊಂಡರು.