ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ; ಎಂಡೋಸಲ್ಫಾನ್ ಪೀಡಿತ, ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಯುವಕನಿಗೆ ಮನಬಂದoತೆ ಥಳಿಸಿದ ದುಷ್ಕರ್ಮಿಗಳ ಗುಂಪು – ಕಹಳೆ ನ್ಯೂಸ್
ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಾರು ಗ್ರಾಮದ ಪಿಂಡಿಕಲ್ಲು ಎಂಬಲ್ಲಿ ಒಂಟಿ ಮಹಿಳೆ ಮತ್ತು ಎಂಡೋಸಲ್ಫಾನ್ ಪೀಡಿತ, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವಕ ವಾಸವಿರುವ ಮನೆಗೆ ಏಕಾ ಏಕಿ ನುಗ್ಗಿದ ಐದು ಮಂದಿ ದುಷ್ಕರ್ಮಿಗಳ ತಂಡ ಯುವಕನಿಗೆ ಥಳಿಸಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಸಂಭವಿಸಿದೆ.
ಹಲ್ಲೆಗೊಳಗಾದ ಯುವಕನನ್ನು ಮುಝಮ್ಮಿಲ್ ಎಂಡೋಸಲ್ಫಾನ್ ಪೀಡಿತ ಸಂತ್ರಸ್ತನಾಗಿದ್ದು ಮಾನಸಿಕ ಖಾಯಿಲೆಯಿಂದ ಬಳಲುತ್ತಿರುವವನಾಗಿದ್ದಾನೆ ಎನ್ನಲಾಗಿದೆ. ಸಂತ್ರಸ್ತ ಮಹಿಳೆಯನ್ನು ಆತನ ತಾಯಿ ಮೈಮುನ (38) ಎಂದು ಗುರುತಿಸಲಾಗಿದೆ.
ಗುರುವಾರ ಸಂಜೆ ಐದು ಮಂದಿ ದುಷ್ಕರ್ಮಿಗಳ ಗುಂಪು ಒಂಟಿ ಮಹಿಳೆ ಹಾಗೂ ಎಂಡೋಸಲ್ಫಾನ್ ಪೀಡಿತ ಮಗ ವಾಸವಿರುವ ಮನೆಗೆ ನುಗ್ಗಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಸಂದರ್ಭದಲ್ಲಿ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಗ ಬೊಬ್ಬೆಹಾಕಿ ಅಡ್ಡ ಬಂದಾಗ ಮಗನಿಗೂ ಮನಬಂದoತೆ ಥಳಿಸಿದ್ದರು ಎನ್ನಲಾಗಿದೆ.
ಆರೋಪಿಗಳ ಪೈಕಿ ಓರ್ವನನ್ನು ಉಪ್ಪಿನಂಗಡಿಯ ಕೂಟೇಲು ಸಮೀಪದ ಮಹಮ್ಮದ್ ಎಂದು ಗುರುತಿಸಲಾಗಿದೆ. ಉಳಿದ ನಾಲ್ವರು ಅಪರಿಚಿತರು ಎನ್ನಲಾಗಿದೆ.
ಸಂತ್ರಸ್ತ ಮಹಿಳೆ ಹಾಗೂ ಹಲ್ಲೆಗೊಳಗಾದ ಮಗ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.