Sunday, January 26, 2025
ಸುದ್ದಿ

ಹೈಕೋರ್ಟ್ ಮೆಟ್ಟಿಲೇರಿದ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಹೆಗ್ಗಡೆ ಕುಟುಂಬಸ್ಥರು – ಕಹಳೆ ನ್ಯೂಸ್

2012 ನೇ ಇಸ್ವಿಯಲ್ಲಿ ನಡೆದ ಕು . ಸೌಜನ್ಯ ಅಸಹಜ ಸಾವಿನ ನಂತರ ಹಾಗೂ  ನ್ಯಾಯಾಲಯದ ತೀರ್ಪಿನ ನಂತರದ ದಿನಗಳಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಹಾಗೂ ಅವರ ಕುಟುಂಬದವರನ್ನು ಅವಮಾನಿಸುತ್ತಿದ್ದು, ಸ್ಥಾಪಿತ ಹಿತಾಸಕ್ತಿಗಳು ಹಾಗೂ ಅವಹೇಳನ ಮಾಡುತ್ತಿರುವ ವಿಚಾರದ ಕುರಿತಾಗಿ ರಾಜ್ಯ ರ‍್ಕಾರಕ್ಕೆ ಸೌಜನ್ಯ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಯಾವುದಾದರೂ ತನಿಖೆ ನಡೆಸುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಹೆಗ್ಗಡೆ ಕುಟುಂಬಸ್ಥರು ರ‍್ನಾಟಕದ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಯಾವುದೇ ರೀತಿಯ ತನಿಖೆಗೆ ಆದೇಶಿಸುವಂತೆ ಪ್ರರ‍್ಥಿಸಿದ್ದು, ನ್ಯಾಯಾಲಯದ ಆದೇಶಗಳನ್ನು ತಿರುಚಿ, ಸತ್ಯದ ವಿಚಾರವನ್ನು ಮರೆಮಾಚುತ್ತಿರುವ ನ್ಯಾಯಾಯಲದ ಆದೇಶಗಳನ್ನು ಉಲ್ಲಂಘಿಸುತ್ತಿರುವ ಹಾಗೂ ನ್ಯಾಯಾಲಯ ಮತ್ತು ನ್ಯಾಯಾಧೀಶರನ್ನು ನಿಂದನೆ ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಯವರ ವಿರುದ್ಧ ಸಹ ಕಾನೂನು ಕ್ರಮ ಕೈಗೊಳ್ಳುವಂತೆ ರಿಟ್ ರ‍್ಜಿ ದಾಖಲಾಗಿದ್ದು, ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಲಿದೆ. ಸದರಿ ಪ್ರಕರಣದಲ್ಲಿ ಸರಕಾರದ ಗೃಹ ಸಚಿವರು ಈ ಪ್ರಕರಣವನ್ನು ಈಗಾಗಲೇ ಮುಗಿದು ಹೋದ ಅಧ್ಯಾಯ ಎಂದು ಹೇಳಿಕೆ ಕೊಟ್ಟಿರೋದು ಗಮನರ‍್ಹ.