ಬಂಟ್ವಾಳ: ರಿಕ್ಷಾ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಕೋಟೆಕಣಿ ಎಂಬಲ್ಲಿ ನಡೆದಿದೆ.
ಕಂಚಿನಡ್ಕ ಪದವು ನಿವಾಸಿ ಅಸಿಯಮ್ಮ ಅವರು ಗಂಭೀರವಾಗಿ ಗಾಯಗೊಂಡ ಮಹಿಳೆಯಾಗಿದ್ದು ಇವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದರು ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಸಾಲೆತ್ತೂರಿನಿಂದ ಮೂವರು ಪ್ರಯಾಣಿಕರು ಕೋಟೆಕಣಿ ಸಂಬoಧಿಕರ ಮನೆಗೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ಕೋಟೆಕಣಿ ಒಳರಸ್ತೆಯಿಂದ ಮುಖ್ಯರಸ್ತೆಗೆ ಬರುವ ವೇಳೆ ಮುಖ್ಯರಸ್ತೆಯಲ್ಲಿ ಬರುತ್ತಿದ್ದ ಕಾರು ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಸಂಪೂರ್ಣ ಜಖಂಗೊAಡಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯ ಪೋಲೀಸರು ಬೇಟಿ ನೀಡಿದ್ದಾರೆ.