Friday, January 24, 2025
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟದಲ್ಲಿ ಮುಖಾಮುಖಿಯಾದ ಸೌಜನ್ಯ ತಾಯಿ ಧೀರಜ್ ಕೆಲ್ಲ, ಮಲ್ಲಿಕ್ ಜೈನ್ ಮತ್ತು ಉದಯ್ ಜೈನ್ : ಸ್ವಾಮಿಯು ಮುಂದೆ ನಾಣ್ಯವಿಟ್ಟು ಪ್ರಾರ್ಥನೆ :-ಕಹಳೆ ನ್ಯೂಸ್

ಧರ್ಮಸ್ಥಳ: ವಿಹಿಂಪ, ಬಜರಂಗದಳ ಕಾರ್ಯಕರ್ತರ ಜತೆ ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳ ಕ್ಷೇತ್ರದವರೆಗೆ ಪಾದಯಾತ್ರೆಯಲ್ಲಿ ಆಗಮಿಸಿದ ಸೌಜನ್ಯ ತಾಯಿ ಕುಸುಮಾವತಿಯವರು ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗದಲ್ಲಿ ಪ್ರಾರ್ಥನೆ ಸಲ್ಲಿಸದ್ದರು.

ಈ ವೇಳೆ ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಸೌಜನ್ಯ ತಾಯಿ ಕುಸುಮಾವತಿಯವರು ಕಣ್ಣೀರಿಟ್ಟು, ನೈಜ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ, ಪ್ರಾರ್ಥನೆ ಸಲ್ಲಿಸಿ, ಅಣ್ಣಪ್ಪ ದೇವರಿಗೆ ನಾಣ್ಯ ನೀಡಿ ಕಾಣಿಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಹಿಂಪ ಹಾಗೂ ಬಜರಂಗದಳದ ಪರವಾಗಿ ವಿಹಿಂಪ ನ ಮುಖಂಡರಾದ ಮುರಳಿಕೃಷ್ಣ ಹಂಸತಡ್ಕ ಅವರು ಪ್ರಾರ್ಥನೆ ಸಲ್ಲಿಸಿದ್ದು, ಅವರಿಗೆ ಸಂಘಟನೆಯ ಮುಖಂಡರು ಸಾಥ್ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸೌಜನ್ಯ ತಾಯಿ ಪ್ರಾರ್ಥನೆ ಸಲ್ಲಿಸಿದ ತಕ್ಷಣ, ಸೌಜನ್ಯ ತಾಯಿ ಆರೋಪಿಸಿದವರಾದ ಮಲ್ಲಿಕ್ ಜೈನ್, ಉದಯ್ ಜೈನ್, ಧೀರಜ್ ಕೆಲ್ಲ ಗುಡಿ ಮುಂಭಾಗ ಪ್ರಾರ್ಥನೆ ಸಲ್ಲಿಸಿದರು. ಧರ್ಮಸ್ಥಳದಲ್ಲಿ ದುರ್ಮರಣವೊಂದು ನಡೆದಿದ್ದು, ಈ ಪ್ರಕರಣದಲ್ಲಿ ನಮ್ಮ ಯಾವುದೇ ಪಾತ್ರ ಇಲ್ಲ. ನಮ್ಮ ಹೆಸರನ್ನು ಅನಾವಶ್ಯಕವಾಗಿ ಎಳೆದು ತರಲಾಗಿದೆ. ನಮ್ಮ ಹೆಸರನ್ನು ಎಳೆದು ತರುವವರಿಗೆ ಶಿಕ್ಷೆಯಾಗಲಿ, ಎಂದು ಪ್ರಾರ್ಥಿಸಿ ಕಾಣಿಕೆ ಅರ್ಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಆ 27 ರಂದು ಬೆಳಿಗ್ಗೆ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳವು ನೇತ್ರಾವತಿ ನದಿಯಿಂದ ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ಸಾಮೂಹಿಕ ಪ್ರಾರ್ಥನೆ ಆಯೋಜಿಸಿತ್ತು. ಈ ಪಾದಯಾತ್ರೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಹಾಗೂ ಅವರ ಕುಟುಂಬದ ಮಹಿಳಾ ಸದಸ್ಯರು ಭಾಗಿಯಾದ್ದರು. ಈ ಪಾದಯಾತ್ರೆಯಲ್ಲಿ ಸೌಜನ್ಯಳ ತಾಯಿ ಭಾಗವಹಿಸುವುದು ಖಚಿತವಾದ ಕೂಡಲೇ ಧೀರಜ್ ಕೆಲ್ಲ, ಮಲ್ಲಿಕ್ ಜೈನ್ ಮತ್ತು ಉದಯ್ ಜೈನ್ ಸಾಮಾಜಿಕ ಜಾಲತಾಣದಲ್ಲಿ ನಾವು ನಿಮ್ಮಗಾಗಿ ಅಣ್ಣಪ್ಪ ಬೆಟ್ಟದ ಬಳಿ ಕಾಯುತ್ತಿರುತ್ತೇವೆ ಎಂಬ ಸಂದೇಶವನ್ನು ಕುಸುಮಾವತಿಯವರನ್ನು ಉದ್ದೇಶಿಸಿ ಹಾಕಿದರು. ಈ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲವೆಂದು ಅಣ್ಣಪ್ಪ ಸ್ವಾಮಿಯ ಮುಂದೆ ಅಣೆ ಪ್ರಮಾಣ ಮಾಡುವುದಾಗಿ ತಿಳಿಸಿದ್ದರು. ಈ ಬಳಿಕ ಇಂದಿನ ಪಾದಯಾತ್ರೆ ಭಾರೀ ಕುತೂಹಲಕ್ಕೆ ಕಾರಣವಾಯಿತು.

ಅಣ್ಣಪ್ಪ ಬೆಟ್ಟದ ಮುಂಭಾಗ ಧರ್ಮಸ್ಥಳದ ನಾಗರೀಕರು ಹಾಗೂ ಭಕ್ತರು ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದರು ಘಟನೆಯ ಗಂಭೀರತೆಯನ್ನು ಅರಿತ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ರಿಶ್ಯಂತ್ ಅವರು ಸ್ವತ: ಫೀಲ್ಡ್ ಗಿಳಿದಿದ್ದು ಧರ್ಮಸ್ಥಳಕ್ಕೆ ದೌಡಯಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೆÇಲೀಸರು ಹದ್ದಿನ ಕಣ್ಣಾಗಿದ್ದರು.