ಪುತ್ತೂರು: ಶಾಸಕರ ನೂತನ ಕಚೇರಿ ಶುಭಾರಂಭ ಕಾರ್ಯಕ್ರಮದ ಬಳಿಕ ಬಿಲ್ಲವ ಯುವ ಸಮಾಜ ಪುತ್ತೂರು ಇದರ ವತಿಯಿಂದ ಪುತ್ತೂರು ಶಾಸಕ ಅಶೋಕ್ ರೈ ಯವರಿಗೆ ಅಭಿನಂದನೆ ಸಲ್ಲಿಸಲಾಯಿತು. ಕ್ಷೇತ್ರದ ಅಭಿವೃದ್ದಿಗೆ ಇನ್ನಷ್ಟು ಒತ್ತು ನೀಡುವ ಮೂಲಕ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಡವರ ಕೆಲಸಗಳು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ಕೆಲಸ ನಿಮ್ಮಿಂದಾಗಲಿ ಎಂದು ಬಿಲ್ಲವ ಯುವ ಸಮಾಜದ ಮುಖಂಡರು ಶಾಸಕರಲ್ಲಿ ವಿನಂತಿಸಿದರು.
ಈ ಸಂದರ್ಭದಲ್ಲಿ ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಕಿರಣ್ ಬಸಂತಕೋಡಿ, ದಿನೇಶ್ ಕರ್ಕೆರಾ ಕೋಲಾಡಿ, ಚಂಧ್ರಶೇಖರ್ ಕಲ್ಲಗುಡ್ಡೆ, ಚಂದ್ರಕಲಾ ಮುಕ್ವೆ, ಮೋಹನ್ ಗುರ್ಜಿನಡ್ಕ, ಕೇಶವ ಅರ್ಕ, ಮೋಹನ್ ಪೂಜಾರಿ ಪುಣಚ, ಅಶೋಕ್ ಪೂಜಾರಿ ಬೊಳ್ಳಾಡಿ, ಕೃಷ್ಣಪ್ಪ ಕಲಾವಿದ, ಎಲ್ಯಣ್ಣ ಪೂಜಾರಿ ಮಿರುಂಡ, ನಾರಾಯಣ ಪೂಜಾರಿ ಬದಿಗುಡ್ಡೆ ಮೊದಲಾದವರು ಉಪಸ್ತಿತರಿದ್ದರು. ನೆನಪಿನ ಕಾಣಿಕೆಯಾಗಿ ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರವನ್ನು ಕೊಡುಗೆಯಾಗಿ ನೀಡಿದರು