ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಸಂದರ್ಭದಲ್ಲಿ ನೀಡಲಾಗಿದ್ದ ರಜೆಯನ್ನು ಸರಿಪಡಿಸುವ ಉದ್ದೇಶದಿಂದ ಸೆಪ್ಟೆಂಬರ್ ಮೊದಲ ವಾರದಿಂದ ಒಟ್ಟು 14 ಶನಿವಾರ ಇಡೀ ದಿನ ಶಾಲೆ ನಡೆಸುವಂತೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ.
ಜುಲೈನಲ್ಲಿ ಸುರಿದ ಅತಿ ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿಯ ನಿರ್ದೇಶನದಂತೆ ಏಳು ದಿನ ರಜೆ ಸಾರಲಾಗಿತ್ತು. ಆ ದಿನಗಳಿಂದ ವಿದ್ಯಾರ್ಥಿಗಳಿಗೆ ಆದ ನಷ್ಟವನ್ನು ಭರ್ತಿ ಮಾಡಲು 14 ಶನಿವಾರಗಳಂದು ಇಡೀ ದಿನ ತರಗತಿ ನಡೆಸಲು ನಿರ್ಧರಿಸಲಾಗಿದೆ ಎಂದು ಉಪನಿರ್ದೇಶಕರು ತಿಳಿಸಿದ್ದಾರೆ.