Sunday, January 26, 2025
ಸುದ್ದಿ

ಭ್ರೂಣ ಲಿಂಗ ಪತ್ತೆಹಚ್ಚುವ ಸ್ಕ್ಯಾನಿಂಗ್ ಸೆಂಟರ್‌ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ –ಕಹಳೆ ನ್ಯೂಸ್

ಕಾನೂನು ಬಾಹಿರವಾಗಿ ಭ್ರೂಣ ಲಿಂಗ ಪತ್ತೆಹಚ್ಚುವ ಕಾರ್ಯ ಮಾಡುವ ಸ್ಕ್ಯಾನಿಂಗ್ ಸೆಂಟರ್‌ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಆರೋಪ ಸಾಬೀತಾದ್ರೆ ಅನುಮತಿಯನ್ನು ರದ್ದುಗೊಳಿಸುತ್ತೇವೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಖಡಕ್ ಎಚ್ಚರಿಕೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಕ್ಯಾನಿಂಗ್ ಸೆಂಟರ್‌ಗಳು ಪರವಾನಿಗೆ ಹೊಂದಿ, ಅನುಮತಿ ಪಡೆದಿರಬೇಕು. ನಿಯಮಾನುಸಾರ ದಾಖಲಾತಿಗಳನ್ನು ಪ್ರತಿದಿನ ನಿರ್ವಹಣೆ ಮಾಡಬೇಕು. ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಹೆಣ್ಣು ಅಥವಾ ಗಂಡು ಎಂಬುದನ್ನು ತಿಳಿಸಬಾರದು.

ಒಂದೊಮ್ಮೆ ಇದನ್ನು ಉಲ್ಲಂಘಿಸಿದ್ದಲ್ಲಿ ಕಾನೂನು ಅಡಿಯಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು. ಹಣ ಸಂಪಾದನೆ ಮಾಡುವ ಉದ್ದೇಶದಿಂದ ಈ ರೀತಿಯ ಕೃತ್ಯಗಳು ನಡೆಯುತ್ತಿದ್ದು, ಪರೀಕ್ಷಿಸಲು ಬರುವ ಸ್ಕ್ಯಾನಿಂಗ್ ಸೆಂಟರ್‌ಗಳ ಸಿಬ್ಬಂದಿ, ಪೋಷಕರಿಗೆ ಮತ್ತು ವೈದ್ಯರಿಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದರು.