Friday, January 24, 2025
ಸುದ್ದಿ

ನಾರಾಯಣ ಗುರುಗಳ ನಿಗಮಕ್ಕೆ ಅನುದಾನ ಒದಗಿಸಿ ; ಸರಕಾರಕ್ಕೆ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆಗ್ರಹ – ಕಹಳೆ ನ್ಯೂಸ್

ಹಿಂದಿನ ಸರಕಾರದ ಅವಧಿಯಲ್ಲಿ ನಾರಾಯಣಗುರುಗಳ ನಿಗಮ ಸ್ಥಾಪನೆ ಆಗಿದೆ. ಅದಕ್ಕೆ ಅನುದಾನವನ್ನ ಮುಖ್ಯಮಂತ್ರಿಗಳು ಬಿಡುಗಡೆ ಮಾಡಬೇಕೆಂದು ಮಾಜಿ ಸಚಿವ,ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು


ಜಿ.ಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಬನ್ನಂಜೆಯ ನಾರಾಯಣಗುರು ಆಡಿಟೋರಿಂನಲ್ಲಿ ಬ್ರಹ್ಮಶ್ರಿ ನಾರಾಯಣಗುರು ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು..

ಜಾಹೀರಾತು
ಜಾಹೀರಾತು
ಜಾಹೀರಾತು

ಬ್ರಹ್ಮನ ಸೃಷ್ಟಿ ಯಲ್ಲಿ ಜಾತಿ, ಧರ್ಮಗಳಿರಬಹುದು ಆದ್ರೆ ಬ್ರಹ್ಮ ಶ್ರೀ ನಾರಾಯಣಗುರುಗಳ ಸೃಷ್ಟಿ ಯಲ್ಲಿ ಒಂದೇ ಜಾತಿ, ಒಂದೇ ಮಾತು,ಒಂದೇ ದೇವರಾಗಿದ್ದಾರೆ ಅಂತ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ನಗರಸಭಾ ಸದಸ್ಯರಾದ ಸವಿತಾ ಹರೀಶ್ ರಾಮ್, ವಿಜಯ ಕೊಡವೂರು, ಗಿರೀಶ್ ಅಂಚನ್, ಸಂತೋಷ್, ಸೆಲಿನ್ ಕರ್ಕಡ, ಮಾಜಿನಗರ ಸಭಾಧ್ಯಕ್ಷರಾದ ಕಿರಣ್ ಕುಮಾರ್, ಮೀನಾಕ್ಷಿ ಮಾಧವ ಬನ್ನಂಜೆ, ಡಿಡಿಪಿಐ ಗಣಪತಿ, ವಿಶೇಷ ಉಪನ್ಯಾಸ ನೀಡಿದ ಡಾ. ಗಣೇಶ್ ಅಮೀನ್ ಸಂಕಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.