ಮಂಗಳೂರು: ಇತ್ತೀಚಿಗಿನ ವಾರಗಳಲ್ಲಿ ತೈಲ ಬೆಲೆಯಲ್ಲಿ ಸಾಕಷ್ಟು ಬೆಳವಣಿಗೆಗಳು ಕಂಡುಬರುತ್ತಿದ್ದು ದಿನೇ ದಿನೇ ಇಂಧನ ಬೆಲೆ ಗಗನಕ್ಕೇರುತ್ತಿದೆ. ಇದರಿಂದ ಪ್ರಯಾಣಿಕರಿಗೆ ಹೊಡೆತ ಬೀಳುತ್ತಿದ್ದು ಟಿಕೆಟ್ ದರಗಳ ರೇಟ್ ಕೂಡ ಹೆಚ್ಚಾಗ್ತಾ ಇದ್ದು ಕರ್ನಾಟಕ ಸಾರಿಗೆ ವ್ಯವಸ್ಥೆಯ ಟಿಕೆಟ್ ದರಗಳೂ ಸಹ ಹೆಚ್ಚಾಗುವ ಸಾಧ್ಯತೆಯಿದೆ.
ಇಂಧನ ಬೆಲೆಯು ಸಾಕಷ್ಟು ಏರಿಕೆಯನ್ನು ಕಂಡಿವೆ. ಹಾಗಾಗಿ ಬಸ್ ಪ್ರಯಾಣ ದರವನ್ನು ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಇದನ್ನು ಮೈತ್ರಿ ಸರ್ಕಾರ ಗಮನದಲ್ಲಿಟ್ಟುಕೊಂಡು ದರ ಹೆಚ್ಚಳ ಮಾಡಿದ್ರೆ ಮತದಾನದ ಮೇಲೆ ತೊಂದರೆ ಬೀಳಬಾರದೆನ್ನುವ ನಿಟ್ಟಿನಲ್ಲಿ ಚುನಾವಣೆ ಆದ ಬಳಿಕ ಪ್ರಯಾಣ ದರವನ್ನು ಹೆಚ್ಚು ಮಾಡಲು ನಿರ್ಧರಿಸಿದೆ. ಮೂರು ಲೋಕಸಭಾ ಕ್ಷೇತ್ರ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿರುವುದರಿಂದ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವವನ್ನು ಸದ್ಯಕ್ಕೆ ಕೈಬಿಡಲಾಗಿದೆ ಅನ್ನೋ ಮಾಹಿತಿ ಕೇಳಿ ಬರ್ತಾ ಇದೆ.
ಇಂದು ಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಸರ್ಕಾರಿ ಬಸ್ ದರ ಏರಿಕೆ ವಿಚಾರ ಪ್ರಸ್ತಾಪವಾಗುವ ಸಾಧ್ಯತೆಗಳಿವೆ. ಆದರೂ ಉಪ ಚುನಾವಣೆ ಘೋಷಣೆಯಾಗಿರುವುದರಿಂದ ಸದ್ಯಕ್ಕೆ ಪ್ರಯಾಣ ದರ ಏರಿಕೆ ಮಾಡುವ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆ ಕಡಿಮೆ ಇದೆ.
ಈ ತೈಲ ದರ ಏರಿಕೆಯಿಂದ ಸಾರಿಗೆ ನಿಗಮಗಳಿಗೆ ಮಾಸಿಕ ಕೋಟ್ಯಂತರ ರೂ ಹೆಚ್ಚುವರಿ ಹೊರೆಯಾಗುತ್ತೆ. ಇದನ್ನು ಗಮನದಲ್ಲಿರಿಸಿಕೊಂಡು ನಾಲ್ಕು ಸಾರಿಗೆ ನಿಗಮಗಳು ಟಿಕೆಟ್ ದರ ಏರಿಕೆ ಸಂಬಂಧ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದವು. ನಾಲ್ಕು ನಿಗಮಗಳು ಆರ್ಥಿಕ ಸಂಕಷ್ಟದಲ್ಲಿರುವುದರಿಂದ ತೈಲ ದರ ಏರಿಕೆಯಿಂದ ನಿಗಮಗಳ ಆರ್ಥಿಕ ಸ್ಥಿತಿ ಇನ್ನಷ್ಟು ಕೆಳಮಟ್ಟಕ್ಕೆ ಇಳಿದಿವೆ. ಹೀಗಾಗಿ ದರ ಏರಿಕೆ ಅನಿವಾರ್ಯವಾಗಿರುವುದರಿಂದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬ ಮಾತು ಕೇಳಿಬರ್ತಾ ಇದೆ.
ಈಗಾಗಲೇ ಉಚ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಟಿಕೆಟ್ ದರ ಏರಿಕೆ ಸಂಬಂಧ ಮಂಗಳವಾರ ಅಂತಿಮ ತೀರ್ಮಾನ ಪ್ರಕಟಿಸುವ ಸಾಧ್ಯತೆ ಕಡಿಮೆ ಇದೆ. ನಾಲ್ಕು ನಿಗಮಗಳ ಬಸ್ ಪ್ರಯಾಣ ದರ ಶೇ,.18ರಷ್ಟು ಹೆಚ್ಚಳ ಮಾಡುವಂತೆ ಸಾರಿಗೆ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ರಾಜ್ಯ ಸರ್ಕಾರ ಶೇ.16ರಷ್ಟು ಹೆಚ್ಚಳ ಮಾಡುವಂತೆ ಸೂಚಿಸಿತ್ತು. ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ 2 ರೂ ಕಡಿಮೆ ಮಾಡಿದ ಬಳಿಕ ಟಿಕೆಟ್ ದರ ಏರಿಕೆಯನ್ನು ತಡೆಹಿಡಿಯಲಾಗಿದೆ. ಒಟ್ಟಾಗಿ ತೈಲ ಬೆಲೆ ಏರಿಕೆಯಿಂದ ಬಸ್ ಪ್ರಯಾಣ ದರವೂ ಕೂಡ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ.