Saturday, January 25, 2025
ಸುದ್ದಿ

ಸೆ.18-22ರವರೆಗೆ ವಿಶೇಷ ಸಂಸತ್ ಅಧಿವೇಶನ; ‘ಒಂದು ದೇಶ, ಒಂದು ಚುನಾವಣೆ’ ಮಸೂದೆ ಮಂಡನೆ ಸಾಧ್ಯತೆ – ಕಹಳೆ ನ್ಯೂಸ್

ಸೆಪ್ಟೆಂಬರ್ 18ರಿಂದ 22ರವರೆಗೆ ಕರೆಯಲಾಗಿರುವ ವಿಶೇಷ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ‘ಒಂದು ದೇಶ, ಒಂದು ಚುನಾವಣೆ’ , ಸಮಾನ ನಾಗರಿಕ ಸಂಹಿತೆ, ಹಾಗೂ ಮಹಿಳಾ ಪ್ರಾತಿನಿಧ್ಯ ಕುರಿತು ಮಸೂದೆಗಳನ್ನು ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.


ಇದಕ್ಕೂ ಮುನ್ನ ಸೆಪ್ಟೆಂಬರ್ 18ರಿಂದ 22ರವರೆಗೆ ಐದು ದಿನಗಳ ಕಲಾಪದ ವಿಶೇಷ ಸಂಸತ್ ಅಧಿವೇಶನ ಕರೆಯಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

“ಅಮೃತ ಕಾಲ ಸಂಸತ್ತಿನಲ್ಲಿ ಫಲಪ್ರದ ಮಾತುಕತೆ ಹಾಗೂ ಚರ್ಚೆಗಳನ್ನು ಎದುರು ನೋಡುತ್ತಿದ್ದೇವೆ” ಎಂದು ಅವರು ಹೇಳಿದ್ದರು.
ಒಂದೇ ಬಾರಿ ಲೋಕಸಭೆ ಹಾಗೂ ವಿವಿಧ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಗುರಿಯನ್ನು ‘ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾವ ಹೊಂದಿದೆ. ಈ ಹಿಂದೆ ಹಲವಾರು ಬಾರಿ ಈ ಯೋಜನೆಯನ್ನು ತಿರಸ್ಕರಿಸಲಾಗಿತ್ತು ಹಾಗೂ ಈ ಕುರಿತು ಭಾರತೀಯ ಕಾನೂನು ಆಯೋಗವು ಅಧ್ಯಯನ ನಡೆಸಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ಲೋಕಸಭೆ ಅಥವಾ ರಾಜ್ಯ ವಿಧಾನಸಭೆಗಳಿಗೆ ಸಾಮಾನ್ಯವಾಗಿ ಅವುಗಳ ಅವಧಿ ಮಕ್ತಾಯಗೊಂಡ ನಂತರ ಚುನಾವಣೆಗಳನ್ನು ನಡೆಸಲಾಗುತ್ತಿದೆ. ಇದರಿಂದ ಸಾಮಾನ್ಯವಾಗಿ ವರ್ಷವೊಂದರಲ್ಲಿ ಎರಡು ಚುನಾವಣಾ ಋತುಗಳಿಗೆ ಕಾರಣವಾಗುತ್ತಿದೆ. ಹೀಗಾಗಿ ಪ್ರತಿ ಋತುವೂ ವಿವಿಧ ರಾಜ್ಯ ವಿಧಾನಸಭೆಗಳ ಮತದಾನಕ್ಕೆ ಸಾಕ್ಷಿಯಾಗುತ್ತಿದೆ.
‘ಒಂದು ದೇಶ, ಒಂದು ಚುನಾವಣೆ’ ಪರಿಕಲ್ಪನೆಯಡಿ, ಲೋಕಸಭೆ ಹಾಗೂ ಎಲ್ಲ ರಾಜ್ಯ ವಿಧಾನಸಭೆಗಳಿಗೂ ಏಕಕಾಲಕ್ಕೆ ಚುನಾವಣೆ ನಡೆಸಲಾಗುತ್ತದೆ. ಈ ಸಂದರ್ಭದಲ್ಲಿ ಒಂದೇ ದಿನ ಮತದಾನ ಪ್ರಕ್ರಿಯೆ ನಡೆಯಲಿದೆ.