Thursday, November 28, 2024
ಸುದ್ದಿ

ಮಂಗಳೂರು ಸಿಸಿಬಿ ಪೊಲೀಸರ ಬಲೆಗೆ ಬಿದ್ದ ನೈಜೀರಿಯಾ ದೇಶದ ಡ್ರಗ್ಸ್ ಜಾಲದ ಸೂತ್ರಧಾರಿ – ಕಹಳೆ ನ್ಯೂಸ್

ಮಂಗಳೂರು: “ಡ್ರಗ್ಸ್ ಫ್ರೀ ಮಂಗಳೂರು” ಎಂಬ ಗುರಿ ಇಟ್ಟುಕೊಂಡು ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ಮತ್ತು ಗಾಂಜಾ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೀಗ ಡ್ರಗ್ಸ್ ಜಾಲದ ಪ್ರಮುಖ ಸೂತ್ರಧಾರಿ ಎನ್ನಲಾದ ನೈಜೀರಿಯಾ ದೇಶದ ಮಹಿಳೆಯೋರ್ವಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು


ಡ್ರಗ್ಸ್ ದಂಧೆಯ ಕಿಂಗ್ ಪಿನ್ ಯಾರಿದ್ದಾರೆಂದು ಪತ್ತೆ ಮಾಡಲು ಮಂಗಳೂರು ಸಿಸಿಬಿ ಪೊಲೀಸರು ಕಳೆದ ಮೂರು ತಿಂಗಳಿನಿAದ ತನಿಖೆ ಕೈಗೊಂಡಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಬಂಧಿತರಾಗಿರುವ ಹೆಚ್ಚಿನ ಆರೋಪಿಗಳಿಗೆ ನೈಜಿರಿಯಾ ಮೂಲದವರಿಂದಲೇ ಡ್ರಗ್ಸ್ ಪೂರೈಕೆ ಆಗುತ್ತಿರುವುದು ತಿಳಿದುಬಂದಿತ್ತು. ನಿರಂತರ ಕಾರ್ಯಾಚರಣೆ ಬಳಿಕ ನೈಜೀರಿಯಾ ಮೂಲದ ಮಹಿಳೆಯೊಬ್ಬಳು ತನ್ನ ನಿಜ ವಿಚಾರ ಮುಚ್ಚಿಟ್ಟು ಬೆಂಗಳೂರಿನ ಯಲಹಂಕದಲ್ಲಿ ವಾಸ್ತವ್ಯ ಇರುವುದು ಪತ್ತೆಯಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಪೊಲೀಸರು ಇದೀಗ ನೈಜೀರಿಯಾ ಮೂಲದ ಅಡೆವೊಲೆ ಅಡೆಟುಟು ಆನು ರೆಜಿನಾ ಜರಾ ಆಯಿಶಾ ಎಂಬಾಕೆಯನ್ನು ಬಂಧಿಸಿದ್ದಾರೆ. ಈಕೆ ಮೂಲತಃ ನೈಜೀರಿಯಾ ದೇಶದ ಒಂಡೋ ರಾಜ್ಯದ ಅಕುರೆ ನಗರದ ನಿವಾಸಿಯಾಗಿದ್ದು ಪ್ರಸಕ್ತ ಯಲಹಂಕ ಹೋಬಳಿಯ ಜಕ್ಕೂರಿನ ಜಿಪಿ ನಾರ್ತ್ ಅವೆನ್ಯೂ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದಳು.

ಆರೋಪಿ ವಶದಿಂದ ಒಟ್ಟು 400 ಗ್ರಾಂ ತೂಕದ ರೂ. 20 ಲಕ್ಷ ಮೌಲ್ಯದ ಎಂಡಿಎAಎ ಮಾದಕ ವಸ್ತು, ಐಫೋನ್-1, ನಗದು ರೂ. 2910 ವಶಪಡಿಸಲಾಗಿದೆ. ವಶಕ್ಕೆ ಪಡೆದ ಸೊತ್ತುಗಳ ಒಟ್ಟು ಮೌಲ್ಯ ರೂ 20,52,910 ಆಗಬಹುದೆಂದು ಪೊಲೀಸರು ತಿಳಿಸಿದ್ದಾರೆ. ಶಿಕ್ಷಣದ ಉದ್ದೇಶದಲ್ಲಿ ಭಾರತದ ವೀಸಾ ಪಡೆದು ಬೆಂಗಳೂರಿಗೆ ಬಂದಿದ್ದ ಈಕೆ, ಬಳಿಕ ಇಲ್ಲಿಯೇ ಉಳಿದುಕೊಂಡಿದ್ದಳು. ಸ್ವಲ್ಪ ಸಮಯ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದು ಆನಂತರ ನರ್ಸಿಂಗ್ ಕೆಲಸ ಬಿಟ್ಟು ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿದ್ದಳು. ಮಂಗಳೂರು ನಗರದ ಉಳ್ಳಾಲ, ಸೆನ್ ಪೊಲೀಸ್ ಠಾಣೆ, ಮಂಗಳೂರು ಉತ್ತರ, ಕಂಕನಾಡಿ ನಗರ, ಕೊಣಾಜೆ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಈಕೆ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಗಳಲ್ಲಿ ಬಂಧಿತ ಆರೋಪಿಗಳು ಈಕೆಯಿಂದಲೇ ಮಾದಕ ವಸ್ತು ಖರೀದಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.