Friday, January 24, 2025
ಸುದ್ದಿ

ಸಮಾಜ ಸೇವಾ ಸಂಘ (ರಿ.) ಉಡುಪಿ ಜಿಲ್ಲೆ ವತಿಯಿಂದ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ “ಜಿಲ್ಲಾ ಪಾಣರ ವಾರ್ಷಿಕೋತ್ಸವ ಸಮಾರಂಭ” – ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಪಾಣ ಯಾನೆ ನಲಿಕೆಯವರ ಸಮಾಜ ಸೇವಾ ಸಂಘ (ರಿ.) ಉಡುಪಿ ಜಿಲ್ಲೆ ವತಿಯಿಂದ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ “ಜಿಲ್ಲಾ ಪಾಣರ ವಾರ್ಷಿಕೋತ್ಸವ ಸಮಾರಂಭ ಮತ್ತು ಸಮಾವೇಶ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ, ಶುಭಹಾರೈಸಿದರು. ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಆಶೀರ್ವಚಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಚಲನಚಿತ್ರ ನಟ ನಿರ್ದೇಶಕರಾದ ರಿಷಬ್ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಉಡುಪಿ ಜಿಲ್ಲಾ ಪಾಣ ಯಾನೆ ನಲಿಕೆಯವರ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪಾಂಡುರಂಗ ಎಸ್. ಪಡ್ಡಂ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು