Sunday, November 24, 2024
ಸುದ್ದಿ

ಇನ್ಮುಂದೆ ಕೆಎಸ್‍ಆರ್ ಟಿಸಿ ಬಸ್‍ಗಳಲ್ಲಿ ಜಾರಿಯಾಗಲಿದೆ ಯುಪಿಐ ಪೇಮೆಂಟ್ ವ್ಯವಸ್ಥೆ – ಕಹಳೆ ನ್ಯೂಸ್

ಇಂದಿನ ಡಿಜಿಟಲ್ ಯುಗದಲ್ಲಿ ಗೂಡಂಗಡಿಯಿಂದ ಹಿಡಿದು ಹೈಪರ್ ಮಾಲ್‍ನಲ್ಲೂ ಡಿಜಿಟಲ್ ಪೇಮೆಂಟ್ ಎಂಬುದು ಸಾಮಾನ್ಯವಾಗಿದೆ.ಇದೇ ರೀತಿ ಕೆಎಸ್‍ಆರ್ ಟಿಸಿ ಬಸ್‍ನಲ್ಲೂ ಯುಪಿಐ ಪೇಮೆಂಟ್ ವ್ಯವಸ್ಥೆ ಜಾರಿಗೊಳಿಸಲು ಸಿದ್ದತೆ ನಡೆದಿದೆ.

ಬಸ್ ನಲ್ಲಿ ಪ್ರತಿದಿನ ನಿರ್ವಾಹಕ ಹಾಗೂ ಪ್ರಯಾಣಿಕರ ಮಧ್ಯೆ ಚಿಲ್ಲರೆಗಾಗಿ ಜಗಳ ಇದ್ದೇ ಇರುತ್ತದೆ. ಇದನ್ನು ತಪ್ಪಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಯುಪಿಐ ಪೇಮೆಂಟ್ ವ್ಯವಸ್ಥೆ ಜಾರಿಗೆ ತರಲು ನಿರ್ಧಾರ ಕೈಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಗದು ರಹಿತ ಪಾವತಿ ಮೂಲಕ ಗ್ರಾಹಕರು ಹಾಗೂ ಸಾರಿಗೆ ಸಿಬ್ಬಂದಿಗೆ ಅನುಕೂಲ ಕಲ್ಪಿಸುವುದು ಕೆಎಸ್‍ಆರ್‍ಟಿಸಿ ಉದ್ದೇಶವಾಗಿದ್ದು, ಇನ್ನು ಮುಂದೆ ಬಸ್‍ಗಳಲ್ಲಿ ಕ್ಯೂಆರ್ ಕೋಡ್ ಅಳವಡಿಸಿ ಪ್ರಯಾಣಿಕರು ಪೇಟಿಎಂ, ಫೋನ್ ಪೇ, ಗೂಗಲ್ ಪೇ ಮೂಲಕ ಹಣ ಪಾವತಿಸಿ, ಟಿಕೆಟ್ ಪಡೆಯಬಹುದಾಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು