Friday, January 24, 2025
ಸುದ್ದಿ

ಸನಾತನ ಧರ್ಮವನ್ನ ನಿರ್ಮೂಲನೆ ಮಾಡಬೇಕು..! : ತಮಿಳುನಾಡು ಸಚಿವ ಉದಯನಿಧಿ ಮಾತಿಗೆ ಪೇಜಾವರ ಶ್ರೀ ಖಂಡನೆ : ಕ್ಷಮೆ ಯಾಚನೆಗೆ ಪಟ್ಟು – ಕಹಳೆ ನ್ಯೂಸ್

ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಕೊರೋನಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೆಂದು ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದ ಖಂಡನೆ ವ್ಯಕ್ತಪಡಿಸಿದ್ದಾರೆ.

ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಮಾತನಾಡಿ, ಉದಯನಿಧಿ ಸ್ಟಾಲಿನ್ ಸಮಾಜದಲ್ಲಿ ವಿಷ ಬೀಜ ಬಿತ್ತಿದ್ದಾರೆ. ಸಮಾಜದಲ್ಲಿ ಇಂತಹ ವಿಷ ಬೀಜ ಬಿತ್ತುವುದು ಸರಿಯಲ್ಲ. ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ಸನಾತನ ಎಂದರೆ ಸದಾ ಕಾಲವೂ ಇರುವಂತಹದ್ದು ಎಂದು ಅರ್ಥ ಬರುತ್ತದೆ. ಅಂತಹ ಧರ್ಮ ನಿರ್ಮೂಲನೆ ಮಾಡಬೇಕು ಎಂದು ಸ್ಟಾಲಿನ್ ಹೇಳಿರುವುದು ಸರಿಯಲ್ಲ ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ದೇಶದ್ಯಾಂತ ಈಗಾಗಲೇ ಹಿಂದೂ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದ್ದು ದೆಹಲಿಯಲ್ಲಿ ಪ್ರಕರಣ ಕೂಡ ದಾಖಲು ಮಾಡಲಾಗಿದೆ. ಹಿಂದೂ ಪರ ಸಂಘಟನೆಗಳಿAದ ಆಂದೋಲನಕ್ಕೆ ನಿರ್ಧರಿಸಲಾಗಿದೆ. ಅಲ್ಲದೇ ಹೇಟ್ ಸ್ಪೀಚ್ ಮಾಡಿದ್ರೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು. ಹೀಗಾಗಿ ಸ್ಟಾಲಿನ್ ವಿರುದ್ಧ ರಾಷ್ಟ್ರವ್ಯಾಪಿ ದೂರು ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದಲ್ಲೂ ಕೇಸ್ ದಾಖಲಿಸಲಾಗುತ್ತದೆ ಎನ್ನಲಾಗಿದೆ. ಈ ಕೂಡಲೇ ಉದಯನಿಧಿ ಸ್ಟಾಲಿನ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು