Saturday, November 23, 2024
ಸುದ್ದಿ

68ನೇ ವಯಸ್ಸಿನಲ್ಲಿ 3ನೇ ಮದುವೆ..! ಟ್ರಿನಾ ಜೊತೆ ಸಪ್ತಪದಿ ತುಳಿದ ಪದ್ಮ ಭೂಷಣ ಪ್ರಶಸ್ತಿ ವಿಜೇತ ಖ್ಯಾತ ವಕೀಲ ಹರೀಶ್ ಸಾಳ್ವೆ – ಕಹಳೆ ನ್ಯೂಸ್

ಭಾರತದ ಪ್ರಖ್ಯಾತ ವಕೀಲ, ಮಾಜಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ವೆ ಅವರು ತಮ್ಮ 68ನೇ ವಯಸ್ಸಿನಲ್ಲಿ 3ನೇ ಮದುವೆಯಾಗಿದ್ದಾರೆ.

ಲಂಡನ್ ನಲ್ಲಿ ಟ್ರಿನಾ ಎಂಬಾಕೆಯ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸದ್ಯ ಸಾಳ್ವೆ ಅವರ ಮದುವೆಯ ವೀಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಸಾಳ್ವೆ ಅವರ ಈ ಅದ್ಧೂರಿ ವಿವಾಹ ಸಮಾರಂಭದಲ್ಲಿ ನೀತಾ ಅಂಬಾನಿ, ಗೋಪಿ ಹಿಂದುಜಾ ಲಲಿತ್ ಮೋದಿ, ಉಜ್ವಲ್ ರಾವತ್ ಸೇರಿ ಹಲವರು ಭಾಗಿಯಾಗಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು

ಸಾಳ್ವೆ ಅವರು 1982ರಲ್ಲಿ ಮೀನಾಕ್ಷಿ ಎಂಬವರನ್ನು ಮದುವೆಯಾಗಿ 2020ರಲ್ಲಿ ವಿಚ್ಛೇದನ ನೀಡಿದ್ದರು. 2020ರಲ್ಲಿ ಕಾರೋಲಿನ್ ಬ್ರೊಸಾರ್ಡ್ ಎಂಬಾಕೆಯನ್ನು ವರಿಸಿದ್ದರು. ಇದೀಗ ಟ್ರಿನಾ ಎಂಬಾಕೆಯನ್ನು ವರಿಸುವ ಮೂಲಕ ಮೂರನೇ ಬಾರಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನವೆಂಬರ್ 1999 ರಿಂದ ನವೆಂಬರ್ 2002 ರವರೆಗೆ ಭಾರತದ ಸಾಲಿಸಿಟರ್ ಜನರಲ್ ಆಗಿ ಸೇವೆ ಸಲ್ಲಿಸಿರುವ ಇವರು ಕುಲಭೂಷಣ್ ಜಾಧವ್ ಪ್ರಕರಣ ಸೇರಿ ಹಲವು ಉನ್ನತ ಮಟ್ಟದ ಪ್ರಕರಣಗಳಲ್ಲಿ ವಕೀಲರಾಗಿದ್ದರು. ಜಾಧವ್ ಪ್ರಕರಣದಲ್ಲಿ 1 ರೂ. ಶುಲ್ಕ ಹಣ ಪಡೆದು ಸುದ್ದಿಯಾಗಿದ್ದರು. 2015ರಲ್ಲಿ ಹರೀಶ್ ಸಾಳ್ವೆ ಪದ್ಮ ಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.