Sunday, January 19, 2025
ರಾಜಕೀಯಸುದ್ದಿ

ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಕರ್ನಾಟಕದಿಂದ ಸ್ಪರ್ಧಿಸುವುದಿಲ್ಲ : ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ಮೋದಿ ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಯ ಕುರಿತು ಸ್ಪಷ್ಟನೆ ನೀಡಿದ ಅವರು ಇದೆಲ್ಲಾ ಸತ್ಯಕ್ಕೆ ದೂರವಾದದ್ದು, ಇದರಲ್ಲಿ ವಾಸ್ತವ ಇಲ್ಲ. ಮೋದಿಯವರು ಇಲ್ಲಿ ಸ್ಪರ್ಧೆ ಮಾಡುವ ಸುದ್ದಿ ಸುಳ್ಳು. ಇದು ಕೇವಲ ಊಹಾಪೋಹವಷ್ಟೇ ಎಂದು ಯಡಿಯೂರಪ್ಪ ಅವರು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸೋಮವಾರ ಬಿಎಸ್​ವೈ ಅವರ ನಿವಾಸದಲ್ಲಿ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಂಬಂಧ ಸಭೆ ನಡೆಸಲಾಯಿತು. ಸಭೆಯ ನಂತರ ಮಾತನಅಡಿದ ಅವರು ನಾಳೆ ಅಥವಾ ನಾಡಿದ್ದು, ಬಿಜೆಪಿ ಕೋರ್​ ಕಮಿಟಿ ಸಭೆ ನಡೆಸಿ ಅಭ್ಯರ್ಥಿಯ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡು ಹೈಕಮಾಂಡ್​ಗೆ ವರದಿ ನೀಡುತ್ತೇವೆ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು